ಸೋಮವಾರಪೇಟೆ, ಜೂ. 11: ತಾಲೂಕಿನ ಹಂಡ್ಲಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಚೆಂಡು ಹೂ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಹೇಮಲಾಕ್ಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ಚೇತನ್ ಮಾತನಾಡಿ, ಚೆಂಡು ಹೂವಿನ ವಿವಿಧ ತಳಿಗಳು, ನಾಟಿಗೆ ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಗಿರೀಶ್ ಹಾಗೂ ಕುಮಾರಸ್ವಾಮಿ ಅವರು ಚೆಂಡು ಹೂ ಕೃಷಿಗೆ ಬಳಸುವ ಗೊಬ್ಬರ, ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಶೈಲಾ ಸೇರಿದಂತೆ 50ಕ್ಕೂ ಅಧಿಕ ರೈತರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.