ಮಡಿಕೇರಿ, ಜ. 23 : ಕೊಪುಕಾನ್ ಶಿಟೋರಿಯಾ ಕರಾಟೆ ಶಾಲೆಯ ಆಶ್ರಯದಲ್ಲಿ ಕುಶಾಲನಗರದಲ್ಲಿ ನಡೆದ ರಾಜ್ಯ ಮತ್ತು ಅಂತರರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ 15 ಚಿನ್ನದ ಪದಕಗಳನ್ನು ಗಳಿಸಿದೆ.

ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಜ. ತಿಮ್ಮಯ್ಯ ಪಬ್ಲಿಕ್ ಶಾಲೆಯ ಸುಮಾರು 28 ವಿದ್ಯಾರ್ಥಿಗಳು ಪಾಲ್ಗೊಂಡು 15 ಚಿನ್ನ, 11 ಬೆಳ್ಳಿ ಹಾಗೂ 20 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ಕರಾಟೆ ಶಿಕ್ಷಕ ಮುಖೇಶ್ ತರಬೇತಿ ನೀಡುತ್ತಿದ್ದಾರೆ. ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 400 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.