ಮಡಿಕೇರಿ, ಜ.10: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 3 ನೇ ವರ್ಷದ ಮಕ್ಕಳ ಕೊಡವ ಜಾನಪದ ಸಾಂಸ್ಕøತಿಕ ನಮ್ಮೆ ತಾ.13 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‍ನ ಆವರಣದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಸಾಂಸ್ಕøತಿಕ ನಮ್ಮೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುತ್ತಿದ್ದು, 8 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮತ್ತು 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವದು. ಅಲ್ಲದೆ ಕೊಡವ ಭಾಷೆಯ ಕಥೆ, ಕವನ, ಚುಟುಕ, ಕಾದಂಬರಿ, ವೈಚಾರಿಕ ಲೇಖನ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡಲಾಗುವದು ಎಂದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶನದಂತೆ ಮಕ್ಕಳಲ್ಲಿ ಜಾನಪದ ಕಲೆಗಳನ್ನು ಕಲಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಶಾಲಾ ಮಕ್ಕಳನ್ನು ಒಂದೆಡೆ ಸೇರಿಸಿ ಜಾನಪದ ಉತ್ಸವವನ್ನು ನಡೆಸುವ ಉದ್ದೇಶದಿಂದ ಮಕ್ಕಳ ಕೊಡವ ಜನಪದ ಹಬ್ಬವನ್ನು ಏರ್ಪಡಿಸ ಲಾಗಿದೆ. ಈ ಉತ್ಸವದಲ್ಲಿ ಜಿಲ್ಲೆಯ ಹಲವಾರು ಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿ ನಿಯರು ಪಾಲ್ಗೊಳ್ಳಲಿದ್ದು, ಕೊಡವ ಜಾನಪದ ಸಂಸ್ಕøತಿಯನ್ನು ಬಿಂಬಿಸಲಿದ್ದಾರೆ.

ಕಳೆದ 2ವರ್ಷಗಳಿಂದ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಕೊಡವ ಜನಪದ ನೃತ್ಯ, ಬಾಳೋಪಾಟ್ ನಂತಹ ಜಾನಪದ ಕಲೆಗಳ ಬಗ್ಗೆ “ಆಟ್-ಪಾಟ್ ಪಡಿಪು” ಕಾರ್ಯಕ್ರಮದ ಮೂಲಕ ತರಬೇತಿಯನ್ನು ನೀಡಲಾಗಿದೆ. ಪಡಿಪು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಪುಗಳಾದ ಸೀರೆ, ಕುಪ್ಯ ಚಾಲೆಗಳನ್ನು ಅಕಾಡೆಮಿ ವತಿಯಿಂದ ವಿತರಣೆ ಮಾಡಲಾಗಿದೆ. ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕೊಡವ ಮಕ್ಕಡ ಕೂಟದ ಸಹಕಾರದೊಂದಿಗೆ ನಡೆಯಲಿರುವ ಜಾನಪದ ಸಾಂಸ್ಕøತಿಕ ನಮ್ಮೆ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಎಸ್.ದೇವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ, ಜಿಲ್ಲಾಧಿಕಾರಿ ಆರ್.ವಿ. ಡಿಸೋಜ ಪಾಲ್ಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ, ಬೆಂಗಳೂರು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲಿನ ಕಾರ್ಯಾಧ್ಯಕ್ಷ ಮಣವಟ್ಟಿರ ಈ.ಚಿಣ್ಣಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಬಿ.ಎಸ್. ತಮ್ಮಯ್ಯ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಪುಸ್ತಕ ಹಾಗೂ ಸಿ.ಡಿ. ಬಿಡುಗಡೆ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸೆÀ್ಯ ಡಾ. ಎಂ.ಪಿ. ರೇಖಾ ಅವರ ಸಂಪಾದ ಕತ್ವದಲ್ಲಿ ಬಸವ ಸಮಿತಿ ಬೆಂಗಳೂರು ಇವರಿಂದ ಪ್ರಕಟಿತವಾದ “ವಚನ” ಕೊಡವಾನುವಾದ ಪುಸ್ತಕ, ಮದ್ರೀರ ಸಂಜು ಬೆಳ್ಯಪ್ಪ ಅವರಿಂದ ಕೊಡವ ಭಾಷೆಯಲ್ಲಿ ತರ್ಜುಮೆಗೊಂಡ ನಾಟಕ ಕೃತಿ “ತೆಳ್‍ಂಗ್‍ನ ಕಾವೇರಿ”, ಐತಿಚಂಡ ರಮೇಶ್ ಉತ್ತಪ್ಪ ವಿರಚಿತ ನಾಟಕ ಕೃತಿ “ಕುಡಿಕಾರ” ಹಾಗೂ ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ ಸಾಹಿತ್ಯ ರಚನೆಯಲ್ಲಿ ಮೂಡಿ ಬಂದಿರುವ “ಕೊಡವ ಕೀರ್ತನ ಮಾಲೆ ಶಾಸ್ತ್ರೀಯ ಪಾಟ್” ಸಿ.ಡಿ. ಬಿಡುಗಡೆ ನಡೆಯಲಿದೆ ತಮ್ಮಯ್ಯ ಮಾಹಿತಿ ನೀಡಿದರು.

ಸದಸ್ಯ ಮಾದೇಟಿರ ಬೆಳ್ಯಪ್ಪ ಮಾತನಾಡಿ “ಆಟ್ ಪಾಟ್ ಪಡಿಪು” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಅಭ್ಯಾಸ ಮಾಡಿರುವ ಕೊಡವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಅಗತ್ಯವಿದ್ದು, ಇದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸ ಲಾಗುತ್ತಿದೆ ಎಂದು ತಿಳಿಸಿದರು.

ಮಕ್ಕಳ ಕೊಡವ ಜಾನಪದ ಸಾಂಸ್ಕøತಿಕ ನಮ್ಮೆಯಲ್ಲಿ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿಗಳು ಕೂಡ ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಮುಖರಾದ ಕರುಣ್ ಕಾಳಯ್ಯ ಹಾಗೂ ಅಮ್ಮಾಟಂಡ ಮೇದಪ್ಪ ಉಪಸ್ಥಿತರಿದ್ದರು.