ಸೋಮವಾರಪೇಟೆ, ಜ.23: ಸುಮಾರು ಎರಡೂವರೆ ಕೋಟಿ ವೆಚ್ಚದಲ್ಲಿ ಗೋತಿಕ್ ಶೈಲಿಯಲ್ಲಿ ನಿರ್ಮಾಣವಾಗಿರುವ ಜಯವೀರ ಮಾತೆ ದೇವಾಲಯ ಉದ್ಘಾಟನೆ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ದೇವಾಲಯದ ಧರ್ಮಗುರು ವಿನ್ಸೆಂಟ್ ಮೋಂತೇರೋ ಹೇಳಿದ್ದಾರೆ.
ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮೈಸೂರು ಬಿಷಪ್ ಥೋಮಸ್ ಅಂತೋಣಿ ವಾಲಪಿಳೈ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್.ಎಸ್. ಜೋಸೆಫ್ ಮರಿ, ಯುವ ಜನ ಮತ್ತು ಸಾಂಖ್ಯಿಕ ಖಾತೆ ಸಚಿವ ಎಂ.ಆರ್. ಸೀತಾರಾಮ್, ಬೆಂಗಳೂರು ನಗರಾಭಿವೃದ್ಧಿ ಸಚಿವÀ ಕೆ.ಜೆ. ಜಾರ್ಜ್, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮಂಗಳೂರು ಶಾಸಕ ಜೆ.ಆರ್. ಲೋಬೋ, ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಭಾಗವಹಿಸಲಿದ್ದಾರೆ ಎಂದರು.
ಬೆಂಗಳೂರಿನ ಎ.ಆರ್.ಎ.ಟಿ.ಟಿ. ವ್ಯವಸ್ಥಾಪಕ ನಿರ್ದೇಶಕ ಟೋನಿ ವಿನ್ಸೆಂಟ್, ಐ.ಎನ್.ಟಿ.ಯು.ಸಿ. ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಜಂಟಿ ಮುಖ್ಯ ಕಾರ್ಯದರ್ಶಿ ನಾಪಂಡ ಮುದ್ದಪ್ಪ ಅವರುಗಳನ್ನು ಸನ್ಮಾನಿಸಲಾಗುವದು. ಸಂಜೆ 6 ಗಂಟೆಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ದೇವಾಲಯದ ಮಾದರಿಯ ರಥದ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ದೇವಾಲಯ ಸಮಿತಿ ಪದಾಧಿಕಾರಿಗಳಾದ ಎನ್.ಜೆ. ಪ್ರಿನ್ಸ್, ವಿನ್ಸೆಂಟ್ ಪಿಂಟೋ, ವಿನ್ಸೆಂಟ್ ಡಿಸೋಜ, ವಿ.ಎ. ಲಾರೆನ್ಸ್ ಉಪಸ್ಥಿತರಿದ್ದರು.