ಮಡಿಕೇರಿ, ಅ. 31: ಕೊಡಗು ಜಿಲ್ಲಾ ಪತ್ರಕರ್ತರ ವೇದಿಕೆಯನ್ನು ನೂತನ ವಾಗಿ ಅಸ್ತಿತ್ವಕ್ಕೆ ತರಲಾಗಿದ್ದು, ಬ್ರಹ್ಮಗಿರಿ ಪತ್ರಿಕೆಯ ಸಂಪಾದಕ ಉಳ್ಳಿಯಡ ಎಂ. ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಕೂರ್ಗ್ ಎಕ್ಸ್‍ಪ್ರೆಸ್ ಪತ್ರಿಕೆಯ ಸಂಪಾದಕ ಶ್ರೀಧರ್ ನೆಲ್ಲಿತ್ತಾಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷರುಗಳಾಗಿ ಹೊಸದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ತೇಲಪಂಡ ಕವನ್ ಕಾರ್ಯಪ್ಪ, ತೂಕ್‍ಬೊಳಕ್ ಪತ್ರಿಕೆಯ ಸಂಪಾದಕ ಮುಲ್ಲೆಂಗಡ ಮಧೋಶ್ ಪೂವಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಕಾವೇರಿ ಟೈಮ್ಸ್‍ನ ವರದಿಗಾರ ಶ್ರೀಧರ್ ಹೂವಲ್ಲಿ, ಕಾರ್ಯದರ್ಶಿಯಾಗಿ ಶಕ್ತಿ ಪತ್ರಿಕೆಯ ವರದಿಗಾರ ರಫೀಕ್ ತೂಚಮಕೇರಿ, ಖಜಾಂಚಿಯಾಗಿ ಮೈಸೂರು ಮಿತ್ರ ಜಿಲ್ಲಾ ವರದಿಗಾರ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಬ್ರಹ್ಮಗಿರಿ ಪತ್ರಿಕೆಯ ಸಂಪಾದಕ ಉಳ್ಳಿಯಡ ಎಂ. ಪೂವಯ್ಯ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್. ಮನು ಶೆಣೈ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವೇದಿಕೆಯ ನಿರ್ದೇಶಕರುಗಳಾಗಿ ಬ್ರಹ್ಮಗಿರಿ ಪತ್ರಿಕೆಯ ಉಪ ಸಂಪಾದಕಿ ಡಾಟಿ ಪೂವಯ್ಯ, ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಎಸ್.ಎ. ಮುರುಳೀಧರ್, ವಾರ್ತಾ ಭಾರತಿ ಪತ್ರಿಕೆಯ ವರದಿಗಾರ ಪಿ.ಕೆ. ಅಬ್ದುಲ್ ರೆಹಮಾನ್, ಮೈಸೂರು ಮಿತ್ರ ಪತ್ರಿಕೆಯ ವರದಿಗಾರ ಎಸ್.ಎಂ. ಚಂಗಪ್ಪ, ಕೊಡಗು ವಾರ್ತೆ ಪತ್ರಿಕೆಯ ಸಂಪಾದಕÀ ಚಮ್ಮಟ್ಟೀರ ಪ್ರವೀಣ್ ಉತ್ತಪ್ಪ, ಮೈಸೂರು ಮಿತ್ರ ಪತ್ರಿಕೆಯ ವರದಿಗಾರ