ಆಲೂರು-ಸಿದ್ದಾಪುರ, ಅ. 5: ಕ್ರೀಡೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಜಿ.ಪಂ. ಸದಸ್ಯ ಸಿ.ಪಿ. ಪುಟ್ಟರಾಜು ಅಭಿಪ್ರಾಯ ಪಟ್ಟರು.
ಶನಿವಾರಸಂತೆ ಭಾರತಿ ಪ.ಪೂ. ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಪ.ಪೂ. ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.-ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಧೃಡತೆಗೊಳುತ್ತದೆ. ಕ್ರೀಡಾಪಟು ಗಳಿಂದ ಪ್ರತಿಯೊಬ್ಬರಲ್ಲಿ ದೇಶಾಭಿಮಾನ ಮೂಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದಿಸೆಯಲ್ಲಿರುವಾಗಲೇ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು.
ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ. ನಾಗಪ್ಪ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಅದೇ ರೀತಿಯಲ್ಲಿ ಪೋಷಕರು ತಮ್ಮ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಜಗನ್ಪಾಲ್, ನಿರ್ದೇಶಕರಾದ ಹೆಚ್.ಪಿ. ಶೇಷಾದ್ರಿ, ಮಹಮದ್ ಪಾಷ, ರಂಗೂಬಾಯಿ ವಿಠಲರಾವ್, ಕಾಲೇಜಿನ ಪ್ರಾಂಶುಪಾಲ ಹೆಚ್.ಸಿ. ಮಲ್ಲೇಶ್, ನಿವೃತ್ತ ಪ್ರಾಂಶುಪಾಲ ಸಿ.ಎಂ. ಪುಟ್ಟಸ್ವಾಮಿ, ಹಿರಿಯ ಉಪನ್ಯಾಸಕ ಎಂ. ನಾಗೇಶ್, ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಟಿ.ಪಿ. ಶಿವಪ್ರಕಾಶ್, ಬೆಳ್ಳಿಯಪ್ಪ, ಉಪನ್ಯಾಸಕರಾದ ಡಿ.ಟಿ. ಸೋಮಶೇಖರ್, ವಿನೀಶ್, ನರಸಿಂಹಮೂರ್ತಿ ಮುಂತಾದವ ರಿದ್ದರು. - ದಿನೇಶ್ ಮಾಲಂಬಿ