ಕುಶಾಲನಗರ, ಅ. 30: 4ನೇ ಹಣಕಾಸು ಆಯೋಗದ ತಂಡÀ ಪ್ರತೀ ಜಿಲ್ಲೆಗಳಿಗೆ ಭೇಟಿ ಮಾಡಿ ಆಯಾ ಜಿಲ್ಲೆಗಳ ಮೂಲಸೌಕರ್ಯಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು 4ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ಜಿ. ಚಿನ್ನಸ್ವಾಮಿ ತಿಳಿಸಿದರು. ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಮಿತಿ ಈಗಾಗಲೆ 15 ಜಿಲ್ಲೆಗಳಿಗೆ ಭೇಟಿ ನೀಡಿದೆ. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳಿಗೆ ಭೇಟಿ ನೀಡಿ ಆಯಾ ವ್ಯಾಪ್ತಿಯ ಸಮಸ್ಯೆಗಳನ್ನು ಆಲಿಸಿ ಸಲಹೆ ಪಡೆದು ಕೊಳ್ಳಲು ನಿರ್ದಿಷ್ಟ ಪ್ರಶ್ನಾವಳಿಗಳನ್ನು ಸಿದ್ದಪಡಿಸಿ ನೀಡಲಾಗಿದೆ. ಇದರ ಆಧಾರದ ಮೇಲೆ ಸೂಕ್ತ ಹಣಕಾಸು ಶಿಫಾರಸಿಗೆ ಆದ್ಯತೆ ನೀಡಲಾಗುವದು ಎಂದರು.

ಪ್ರತೀ ಜಿಲ್ಲೆಯಲ್ಲೂ ಒಂದೊಂದು ಪ್ರಮುಖ ಸಮಸ್ಯೆಯಿದ್ದು ಪ್ರಮುಖವಾಗಿ ಎಲ್ಲೆಡೆ ನೀರಿನ ಸಮಸ್ಯೆ ಉದ್ಭವಿಸಿದೆ. ನೀರಿನ ಸರಬರಾಜಿಗೆ ಸಂಬಂಧಿಸಿದಂತೆ ಸಲಹೆಗಳ ಆಧಾರದ ಮೇಲೆ ಕ್ರಮಕೈಗೊಳ್ಳ ಲಾಗುವದು ಎಂದು ತಿಳಿಸಿದರು.

ಈ ಸಂದರ್ಭ ಹಣಕಾಸು ಸಮಿತಿಯ ಸದಸ್ಯರಾದ ಶಶಿಧರ್, ಸಮಾಲೋಚಕ ಚಂದ್ರಶೇಖರ್, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್ ಇದ್ದರು.