ಮಡಿಕೇರಿ, ನ.7: ಟಿಪ್ಪು ಜಯಂತಿ ಹಿನೆÀ್ನಲೆ ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144ರಡಿ ತಾ.7ರ ಸಂಜೆ 4 ಗಂಟೆಯಿಂದ ತಾ. 11 ರ ಬೆಳಿಗ್ಗೆ 8 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಆದೇಶ ಹೊರಡಿಸಿದ್ದಾರೆ.

ಆದರೆ ಈ ದಿನಗಳದಂದು ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ಮದುವೆ ಸಮಾರಂಭಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಸಾರ್ವಜನಿಕ, ರಾಜಕೀಯ ಬಹಿರಂಗ ಸಭೆ-ಸಮಾರಂಭ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತಾ-ರೋಕೋ ಹಾಗೂ ಮುತ್ತಿಗೆ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.

ನಿಷೇಧಿತ ಅವಧಿಯಲ್ಲಿ ಪಾಲಿಸಬೇಕಾದ ಷರತ್ತುಗಳು

ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ಮದುವೆ ಸಮಾರಂಭಗಳನ್ನು ಹೊರತುಪಡಿಸಿ ಉಳಿದಂತೆ ಯಾವದೇ ಸಭೆ ಸಮಾರಂಭ ಮತ್ತು ಮೆರವಣಿಗೆಯನ್ನು ನಡೆಸಬಾರದು.