ಮಡಿಕೇರಿ, ನ. 8: ಕೊಡಗು ಜಿಲ್ಲೆಯಲ್ಲಿ ತಾ. 10 ರಂದು (ನಾಳೆ) ರಾಜ್ಯ ಸರ್ಕಾರದ ಆದೇಶದಂತೆ ಟಿಪ್ಪು ಜಯಂತಿ ಆಚರಣೆ ಜಿಲ್ಲಾ ಡಳಿತದ ವತಿಯಿಂದ ನಡೆಯಲಿದೆ. ಜಿಲ್ಲಾ ಕೇಂದ್ರ ಮಡಿಕೇರಿ ತಾಲೂಕು ಕೇಂದ್ರಗಳಾದ ಸೋಮವಾರಪೇಟೆ, ವೀರಾಜಪೇಟೆ ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಯಾವದೇ ಅನಾಹುತ ಸಂಭವಿಸ ದಂತೆ ಜಿಲ್ಲೆಯಾದ್ಯಂತ ಖಾಕಿ ಸರ್ಪಗಾವಲು ನಿರ್ಮಿಸ ಲಾಗಿದ್ದು, ಶಾಂತ ರೀತಿಯಲ್ಲಿ ಟಿಪ್ಪು ಜಯಂತಿ ಆಚರಿಸಲು ಕೊಡಗು ಕೈಗೊಳ್ಳಲಾಗಿದೆ. ಸೂಕ್ಷ್ಮ ಪರಿಸ್ಥಿತಿ ಎದುರಾದಲ್ಲಿ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ 10 ಮಂದಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸ ಲಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.