ಗೋಣಿಕೊಪ್ಪಲು, ನ. 17: ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ಸ್ಥಾನವನ್ನು ‘ಕೊಡವೇತರರಿಗೆ ನೀಡಿ’ ಎನ್ನುವ ಮೂಲಕ ಜಾತ್ಯತೀತ ಕಾಂಗ್ರೆಸ್ ಪಕ್ಷದ ಧೋರಣೆಗೆ ಕಳಂಕ ತಂದಿರುವವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸು ವಂತೆ ವೀರಾಜಪೇಟೆ ತಾಲೂಕಿನ ಕಾಂಗ್ರೆಸ್ ಪ್ರಮುಖರು ಆಗ್ರಹಿಸಿದ್ದಾರೆ.ಗೋಣಿಕೊಪ್ಪಲಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ, ಪೆÇನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಟಾಟು ಮೊಣ್ಣಪ್ಪ, ಹಿರಿಯ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಕೆ. ಪೆÇನ್ನಪ್ಪ, ಹುದಿಕೇರಿ ಕಾಂಗ್ರೆಸ್ ಪ್ರಮುಖರಾದ ಚೆಕ್ಕೇರ ವಾಸು ಕುಟ್ಟಪ್ಪ, ಪೆÇನ್ನಂಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮತ್ರಂಡ ದಿಲ್ಲು ಅವರು ಕಾಂಗ್ರೆಸ್ ಪಕ್ಷದಲ್ಲಿ ಜಾತೀಯ ವಿಷ ಬೀಜವನ್ನು ಬಿತ್ತುವವರನ್ನು ಕೂಡಲೇ ಉಚ್ಚಾಟಿಸಿ ಎಂದು ಒತ್ತಾಯಿಸಿದ್ದಾರೆ.
ಮಡಿಕೇರಿ ಹೊಟೇಲ್‍ನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಪ್ರಸನ್ನ ಅಧ್ಯಕ್ಷತೆ ಯಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ ಮತ್ತಿತರರು ಕೊಡವೇತರರಿಗೆ ಅಧ್ಯಕ್ಷ ಸ್ಥಾನ ನೀಡಿ ಎಂದು ಪತ್ರಿಕೆ ಮೂಲಕ ಒತ್ತಾಯಿಸಿರುವದು ಖಂಡನೀಯ.