ಮಡಿಕೇರಿ, ಆ. 17: ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗಿ ವಿರೋಧಿ ಮಾಸಾಚರಣೆ ಸಂಬಂಧ ಜಾಗೃತಿ ಜಾಥಾ ನಡೆಯಿತು. ಜಾಥಾವು ನಗರದ ಸರ್ಕಾರಿ ಪದವಿ ಕಾಲೇಜಿನಿಂದ ಖಾಸಗಿ ಬಸ್ ನಿಲ್ದಾಣದ ಮೂಲಕ ಜನರಲ್ ತಿಮ್ಮಯ್ಯ ವೃತ್ತದವರೆಗೆ ಜರುಗಿತು. ಈ ಸಂದರ್ಭ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಏಡಿಸ್ ಸೊಳ್ಳೆಗಳಿಂದ ಹರಡುವ ಡೆಂಗಿ ಹಾಗೂ ಚಿಕುನ್‍ಗುನ್ಯ ರೋಗಗಳು ಮತ್ತು ಅವುಗಳ ನಿಯಂತ್ರಣ ಕುರಿತ ಘೋಷ ವಾಕ್ಯ ಹಾಗೂ ನಾಮಫಲಕಗಳ ಮೂಲಕ ಜಾಗೃತಿ ಮೂಡಿಸಿದರು. ಈ ಸಂದರ್ಭ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಕುಮಾರ್ ಹಾಗೂ ಇತರರು ಇದ್ದರು.