ಮಡಿಕೇರಿ, ನ. 11: ಟಿಪ್ಪು ಜಯಂತಿ ಸರಕಾರಿ ಕಾರ್ಯಕ್ರಮದ ಸಂದರ್ಭ ಮೊಬೈಲ್‍ನಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ನೈತಿಕ ಹೊಣೆ ಹೊತ್ತು ತÀಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಗೌರವಾನ್ವಿತ ಸ್ಥಾನ ಹೊಂದಿರುವ ಸಚಿವ ತನ್ವೀರ್ ಸೇಠ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡುತ್ತಿದ್ದುದು ಅವರ ಘನತೆಗೆ ತಕ್ಕದಲ್ಲ.

ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಮನುಮುತ್ತಪ್ಪ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.