ಮಡಿಕೇರಿ, ಡಿ. 5: ರಾಜ್ಯ ಬಾಲಭವನ ಸಮಿತಿ ವತಿಯಿಂದ ಹಾಗೂ ತಾಲೂಕು ಬಾಲಭವನ ಸಮಿತಿ ವತಿಯಿಂದ ತಾ. 10 ರಂದು ಬೆಳಿಗ್ಗೆ 10 ಗಂಟೆಗೆ ಸೋಮವಾರಪೇಟೆ ತಾಲೂಕಿನ ಚೆನ್ನಬಸಪ್ಪ ಸಭಾಂಗಣದಲ್ಲಿ ತಾಲೂಕು ಮಟ್ಟದ ‘ಕಲಾಶ್ರೀ ಆಯ್ಕೆ ಶಿಬಿರ’ ನಡೆಯಲಿದೆ.

ಶಿಬಿರದಲ್ಲಿ 9 ರಿಂದ 16 ವರ್ಷದೊಳಗಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಶಿಬಿರದಲ್ಲಿ 4 ಚಟುವಟಿಕೆಗಳಿದ್ದು ಸೃಜನಾತ್ಮಕ ಕಲೆ (ಚಿತ್ರ ಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು). ಸೃಜನಾತ್ಮಕ ಬರವಣಿಗೆ (ಕತೆ, ಕವನ, ಪ್ರಬಂಧ ಬರೆಯುವದು, ಈ ಮೂರು ವಿಭಾಗದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು). ಸೃಜನಾತ್ಮಕ ಪ್ರದರ್ಶನ ಕಲೆ-ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಇತರ ಯಾವದಾದರೂ ಒಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶವಿದೆ. ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ, ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 9.30 ಗಂಟೆಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವದು. (ಅಗತ್ಯ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು).

ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರಾಜ್ ಮಹಲ್ ಬಿಲ್ಡಿಂಗ್, ಸೋಮವಾರಪೇಟೆ, ದೂರವಾಣಿ ಸಂಖ್ಯೆ: 08276-282281 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.