ಮಡಿಕೆÉೀರಿ, ಜ. 19: ನೇತಾಜಿ ಯುವಕ ಮತ್ತು ಯುವತಿ ಮಂಡಲದ ಬೆಳ್ಳಿ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕ್ರೀಡಾ ಕೂಟ, ಸಾಂಸ್ಕøತಿಕ ಮೇಳ ಹಾಗೂ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ 120ನೇ ಜನ್ಮ ದಿನಾಚರಣೆ ಜ.21 ರಿಂದ 23 ರವರೆಗೆ ತಾಳತ್ ಮನೆಯ ಆಟದ ಮೈದಾನದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳ್ಳಿ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಗಿರೀಶ್ ತಾಳತ್ ಮನೆ, ಮೂರು ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಾ. 21 ರಂದು ಬೆಳ್ಳಿ ಮಹೋತ್ಸವದ ಸಮಾರೋಪ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ವಾಲಿಬಾಲ್ ಪಂದ್ಯಾವಳಿಯನ್ನು ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ. ನಾರಾಯಣ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಜೆ.ಜೆ. ಕಾರ್ಯಪ್ಪ, ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಐತಪ್ಪ ರೈ, ಮಡಿಕೆÉೀರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಬಿ.ಐ. ರಮೇಶ್ ರೈ ಹಾಗೂ ಮದೆಗ್ರಾಮ ಪಂಚಾಯಿತಿ ಸದಸ್ಯೆ ಪೊನ್ನೆಟ್ಟಿ ನಿತ್ಯ ಕುಮಾರಿ ಪಾಲ್ಗೊಳ್ಳಲಿದ್ದಾರೆ.

ತಾ. 22 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಅರೆ ಭಾಷಾ ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ನಡೆಯುವ ರಾಜ್ಯ ಮಟ್ಟದ ಸಾಂಸ್ಕøತಿಕ ಮೇಳವನ್ನು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಜಿ.ಪಂ. ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ಸಮಾಜ ಸೇವಕರಾದ ಸಂಕೇತ್ ಪೂವಯ್ಯ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ರಾಣಿ ಮಾಚಯ್ಯ ಪಾಲ್ಗೊಳ್ಳಲಿದ್ದಾರೆ.

ತಾ. 23 ರಂದು ಅಂತರ್ ಜಿಲ್ಲಾ ಮಟ್ಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿ ಹಾಗೂ ಮಿನಿ ಮೆರಥಾನ್‍ನ್ನು ಉದ್ಯಮಿ ಜಗದೀಶ್ ರೈ ಉದ್ಘಾಟಿಸಲಿದ್ದಾರೆ. ಜಿಪಂ ಸದಸ್ಯೆ ಯಾಲದಾಳು ಪದ್ಮಾವತಿ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಪಂಚಾಯಿತಿ ಸದಸ್ಯ ಕೊಡಪಾಲು ಗಣಪತಿ ಹಾಗೂ ಶ್ರೀ ದುರ್ಗಾ ಭಗವತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಚೆಟ್ಟೋಳಿರ ಅಪ್ಪಯ್ಯ ಮುಖ್ಯ ಅತಿಥಿಗಳಾಗಿ ಪಾಳ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಉಸ್ತುವಾರಿ ಸಚಿವ ಎ.ಆರ್. ಸೀತಾರಾಮ್ ಉದ್ಘಾಟಿಸಲಿದ್ದು, ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಎಂ.ಸಿ. ನಾಣಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ನೆನಪಿನ ಸಂಚಿಕೆಯ ಮುಖ ಪುಟವನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅನಾವರಣಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಅತಿಥಿಗಳಾಗಿ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಉದ್ಯಮಿ ನಾಪಂಡ ಮುತ್ತಪ್ಪ, ಮದೆ ಗ್ರಾ.ಪಂ. ಅಧ್ಯಕ್ಷ ಮುದ್ದಿಯನ ಚಂದ್ರಶೇಖರ್ ಪಾಲ್ಗೊಳ್ಳಲಿದ್ದಾರೆ.

ಸಂಜೆ 6 ಗಂಟೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆಯೆಂದು ಗಿರೀಶ್ ತಾಳತ್ ಮನೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನೇತಾಜಿ ಯುವತಿ ಮಂಡಲಿ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷೆ ಮಂಜುಳಾ ಆನಂದ್, ನೇತಾಜಿ ಯುವಕ ಮಂಡಲದ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಉಪಾಧ್ಯಕ್ಷರಾದ ದಿವೇಶ್ ರೈ ಹಾಗೂ ಖಜಾಂಚಿ ಕೆ.ಕೆ. ಗಣೇಶ್ ಉಪಸ್ಥಿತರಿದ್ದರು.