ವೀರಾಜಪೇಟೆ, ಸೆ. 22: ಗಡಿನಾಡಾದ ವೀರಾಜಪೇಟೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವದು ಸಂತಸದ ವಿಚಾರ. ಇದಕ್ಕೆ ಕೊಡಗಿನ ಎಲ್ಲಾ ಜನತೆಯ ಸಹಕಾರದ ಅಗತ್ಯ ಇದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ವೀರಾಜಪೇಟೆ ಶಾಸಕರ ಭವನದಲ್ಲಿ 7ನೇ ತಾಲೂಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಮ್ಮೇಳನದ ಯಶಸ್ವಿಗೆ ಇಂದಿನಿಂದಲೇ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ರಾಜ್ಯದಲ್ಲಿ ಕಾವೇರಿ ನೀರಿನ ಗೊಂದಲವಿದ್ದರೂ ಗಡಿನಾಡಿನಲ್ಲಿ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಬೇಕಿದೆ, ಈ ಮೂಲಕ ಕನ್ನಡ ಉಳಿಸುವ ಹಾಗೂ ಬೆಳೆಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಒಂದೆಡೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು ಅದರ ನೋವು ನಮಗೂ ಇದೆ. . ಆದರೂ ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಬೇಕಿದೆ. ಈ ಸಮ್ಮೇಳನಕ್ಕೆ ನಮಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ವೀರಾಜಪೇಟೆ ತಾಲೂಕಿನ ಗಡಿ ಭಾಗದಲ್ಲಿ ಹೆಚ್ಚು ಕನ್ನಡ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಮುಂದಿನ ಅಕ್ಟೋಬರ್‍ನಲ್ಲಿ ಕುಟ್ಟದಲ್ಲಿ ಗಡಿ ನಾಡ ಉತ್ಸವ ಅಯೋಜಿಸಲಾಗುತ್ತಿದೆ. ನ.-30 ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಮನೆ ಮನೆಯ ಹಬ್ಬವಾಗಿ ಆಚರಿಸುವ ನಿಟ್ಟಿನಲ್ಲಿ ನ.- 1 ರಿಂದ ತಾಲೂಕಿನ ಕುಟ್ಟದಿಂದ ಆರಂಭಗೊಂಡು ತಾಲೂಕಿನ ಎಲ್ಲಾ ಕಡೆ ಮನೆ ಮನೆ ಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದರು.
ಸಮಾರಂಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಧೋಶ್ ಪೂವಯ್ಯ, ಕಾರ್ಯದರ್ಶಿ ಚಮ್ಮಟ್ಟೀರ ಪ್ರವೀಣ್ ಮತ್ತು ಸಹ ಕಾರ್ಯದರ್ಶಿ ರೇಖಾ ಶ್ರೀಧರ್, ಸಮಿತಿ ಸದಸ್ಯೆ ನಳಿನಾಕ್ಷಿ, ಮಾಧÀ್ಯಮ ಕಾರ್ಯದರ್ಶಿ ಜಗದೀಶ್ ಜೋಡುಬಿಟ್ಟಿ, ಪಟ್ರಪಂಡ ರಘು ನಾಣಯ್ಯ, ಪ ಪಂ ಮಾಜಿ ಅಧ್ಯಕ್ಷೆ ಮನೆಯಪಂಡ ದೇಚಮ್ಮ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಮತ್ತು ಜಿ.ಪಂ. ಸದಸ್ಯ ಅಚ್ಚಪಂಡ ಮಹೇಶ್, ಸಾಹಿತಿ ಬೇಬಿ ಚಿಣ್ಣಪ್ಪ, ಸಿ. ವಿಶ್ವನಾಥ್, ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ಕಾರ್ಯದರ್ಶಿ ಮತ್ತು ಶಿಕ್ಷಕ ದೇವರ್, ಲಾಂಛನ ರಚಿಸಿದÀ ಶಿಕ್ಷಕ ಕ್ಲಿರ್ಪಡ್, ಮಧು ದೇವಯ್ಯ ಉಪಸ್ಥಿತರಿದ್ದರು.