ಮಡಿಕೇರಿ, ಸೆ. 27: ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು, ಮನುಷ್ಯನ ಉಜ್ವಲ ಭವಿಷ್ಯಕ್ಕೆ ಕ್ರೀಡೆಗಳೂ ಸಹಕಾರಿಯಾಗಲಿದೆ. ಕ್ರೀಡೆಯಲ್ಲಿ ಯಾರು ತೊಡಗು ತ್ತಾರೋ ಅವರು ಸದೃಢ ಆರೋಗ್ಯ ಹಾಗೂ ಮಾನಸಿಕ ಬೆಳವಣಿಗೆ ಯೊಂದಿಗೆ ಉತ್ಸಾಹಿಗಳಾಗಿರುತ್ತಾರೆ ಎಂದರು. ನಂತರ ಕ್ರೀಡೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹುದೇರಿ ರಾಜೇಂದ್ರ, ಅರೆಭಾಷೆ ಸಾಹಿತ್ಯ ಮತ್ತು ಸಾಹಿತ್ಯ ಅಕೆಡಾಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಯಾಲದಾಳು ಪದ್ಮಾವತಿ, ತಾಲೂಕು ಪಂಚಾಯತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್, ಮದೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುದ್ಯನ ಚಂದ್ರಶೇಖರ್ ಹಾಗೂ ಪ್ರಮುಖರಾದ ಕುಟ್ಟೇಟಿರ ಮಾದಪ್ಪ, ಕಿಮ್ಮುಡಿರ ಜಗದಿಶ್, ಹುದೇರಿ ಮುತ್ತಪ್ಪ ಉಪಸ್ಥಿತರಿದ್ದರು.