ಭಾಗಮಂಡಲ, ಸೆ. 26: ಅಕ್ಟೋಬರ್ 17ರಂದು ನಡೆಯಲಿರುವ ಕಾವೇರಿ ತುಲಾ ಸಂಕ್ರಮಣಕ್ಕೆ ಚಾಲನೆ ನೀಡಲಾಗಿದೆ. ಭಾಗಮಂಡಲ ಭಗಂಡೇಶ್ವರ ದೇಗುಲದ ತಕ್ಕರಾದ ಬಳ್ಳಡ್ಕ ಕುಟುಂಬದ ಐನ್‍ಮನೆಯಲ್ಲಿ ಇಂದು ಬೆಳಿಗ್ಗೆ 7.25ಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಸಂಪ್ರದಾಯದಂತೆ ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ, ಕುದುಕುಳಿ ಭರತ್, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕುಮಾರ್, ಪಾರುಪತ್ತೆಗಾರ ಪಾಪಯ್ಯ ಇನ್ನಿತರರಿದ್ದರು.