ಮಡಿಕೇರಿ, ಅ. 4: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ಕಚೇರಿ ಮಡಿಕೇರಿ ಯಲ್ಲಿ ಉದ್ಘಾಟನೆ ಗೊಂಡಿದೆ. ಕಚೇರಿ ಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಹೆಚ್.ಬಿ. ದೇವದಾಸ್, ದಲಿತ ಸಂಘÀರ್ಷ ಸಮಿತಿಯ ಜಿಲ್ಲಾ ಘಟಕ ಶೈಕ್ಷಣಿಕ ಹಾಗೂ ಸಾಮಾಜಿಕ ಕಳಕಳಿಯಿಂದ ನಡೆಸುತ್ತಿರುವ ಕಾರ್ಯಕ್ರಮಗಳು ಇತರ ಸಂಘÀಟನೆಗಳಿಗೆ ಮಾದರಿಯಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪ್ಲಾಸ್ಟಿಕ್ ಸರ್ಜನ್ ಡಾ. ಎಂ.ಎ. ಪ್ರಕಾಶ್ ಕುಮಾರ್, ಸಂಘÀಟನೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವದು ಶ್ಲಾಘನಾರ್ಹ ವೆಂದರು.
ಚಿತ್ರದುರ್ಗದ ಬಿಎಡ್ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀದುರ್ಗ ಮಾತನಾಡಿ, ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಂಘಟನೆ ಮೂಲಕ ನಡೆಸುವಂತೆ ಸಲಹೆ ನೀಡಿದರು. ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ವಹಿಸಿದ್ದರು. ಜಿಲ್ಲಾ ಸಂಘಟನಾ ಸಂಚಾಲಕ ಹೆಚ್. ಐತಪ್ಪ, ಸಾವಿತ್ರಿಯಮ್ಮ ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.