ಮಡಿಕೇರಿ, ಆ. 23: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಸಮಂಟಪಗಳ ಸಮಿತಿಯ ಅಧ್ಯಕ್ಷ ಸ್ಥಾನ ಈ ಬಾರಿ ಕರವಲೆ ಭಗವತಿ ಶ್ರೀ ಮಹಿಷ ಮರ್ದಿನಿ ದೇವಾಲಯ ದಸರಾ ಸಮಿತಿಗೆ ಲಭಿಸಿದೆ.ಈ ಬಾರಿಯ ದಶಮಂಟಪ ಸಮಿತಿ ಅಧ್ಯಕ್ಷರಾಗಿ ತೆಕ್ಕಡೆ ಕೌಶಿ ಕಾವೇರಪ್ಪ ಆಯ್ಕೆಯಾಗಿದ್ದಾರೆ. ಇಂದು ನಡೆದ ದಶಮಂಟಪ ಸಮಿತಿ ಸಭೆಯಲ್ಲಿ ಕಳೆದ ಬಾರಿಯ ದಶಮಂಟಪ ಸಮಿತಿ ಅಧ್ಯಕ್ಷ ಕೋಟೆ ಗಣಪತಿ ದೇವಾಲಯದ ಬಿ.ಎಂ. ರಾಜೇಶ್ ಅವರು ಈ ಬಾರಿಯ ಅಧ್ಯಕ್ಷ ಕೌಶಿ ಕಾವೇರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ದಶಮಂಟಪ ಸಮಿತಿಯ ಕಳೆದ ಬಾರಿಯ ಕಾರ್ಯದರ್ಶಿ ಸತೀಶ್, ಉಪಾಧ್ಯಕ್ಷ ಆರ್.ಬಿ. ರವಿ, ನಗರಸಭಾ ಸದಸ್ಯ ಕೆ.ಎಸ್. ರಮೇಶ್ ಉಪಸ್ಥಿತರಿದ್ದರು. ದಶಮಂಟಪ ಸಮಿತಿ ಸಭೆಯಲ್ಲಿ ಕಳೆದ ಬಾರಿಯ ದಶಮಂಟಪ ಸಮಿತಿ ಅಧ್ಯಕ್ಷ ಕೋಟೆ ಗಣಪತಿ ದೇವಾಲಯದ ಬಿ.ಎಂ. ರಾಜೇಶ್ ಅವರು ಈ ಬಾರಿಯ ಅಧ್ಯಕ್ಷ ಕೌಶಿ ಕಾವೇರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ದಶಮಂಟಪ ಸಮಿತಿಯ ಕಳೆದ ಬಾರಿಯ ಕಾರ್ಯದರ್ಶಿ ಸತೀಶ್, ಉಪಾಧ್ಯಕ್ಷ ಆರ್.ಬಿ. ರವಿ, ನಗರಸಭಾ ಸದಸ್ಯ ಕೆ.ಎಸ್. ರಮೇಶ್ ಉಪಸ್ಥಿತರಿದ್ದರು.