ಸಿದ್ದಾಪುರ, ಡಿ. 8: ಮಾಲ್ದಾರೆ ಸಮೀಪದ ದಿಡ್ಡಳ್ಳಿ ಅರಣ್ಯ ಪ್ರದೇಶದಲ್ಲಿ ಗುಡಿಸಲು ತೆರವುಗೊಳಿಸಲಾದ ಪ್ರದೇಶಕ್ಕೆ ಜಿ.ಪಂ. ಅಧ್ಯಕ್ಷ ಹರೀಶ್ ಭೇಟಿ ನೀಡಿ ಪರಿಶೀಲಿಸಿದರು.

ದಿಡ್ಡಳ್ಳಿ ಅರಣ್ಯ ಪ್ರದೇಶದಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದ ಗಿರಿಜನರು ತಮ್ಮ ಅಳಲನ್ನು ತೋಡಿಕೊಂಡರು. ಬಳಿಕ ಅರಣ್ಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ನಿವಾಸಿಗಳನ್ನು ಇಲ್ಲಿಯೇ ವಾಸಿಸಲು ಅವಕಾಶ ನೀಡಿ ಎಂದು ಸೂಚಿಸಿದರು.

ನಂತರ ವೀರಾಜಪೇಟೆ ತಹಶೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳನ್ನು ಕರೆಸಿ ವಿಷಯದ ಬಗ್ಗೆ ಚರ್ಚಿಸಿದರು. ಮಾತ್ರವಲ್ಲದೇ ಪೈಸಾರಿ ಜಾಗದಲ್ಲಿ ಗಿರಿಜನರಿಗೆ ಪುನರ್ವಸತಿ ಕಲ್ಪಿಸುವಂತೆ ಹೇಳಿದರು.

ತಹಶೀಲ್ದಾರ್ ಶಿವಪ್ಪ ಮಾತನಾಡಿ, ವೀರಾಜಪೇಟೆ ತಾಲೂಕಿನ ವಿವಿಧೆಡೆ ಪೈಸಾರಿ ಜಾಗಗಳನ್ನು ಗುರುತಿಸಿದ್ದು, ಗ್ರಾ.ಪಂ. ಮಟ್ಟದಲ್ಲಿ ನಿವೇಶನ ರಹಿತರ ಪಟ್ಟಿ ತಯಾರಿಸಿ, ನಿವೇಶನ ನೀಡಲಾಗು ವದು. ಅಲ್ಲಿಯವರೆಗೂ ಅರಣ್ಯವನ್ನು ಬಿಟ್ಟು ಈ ಹಿಂದೆ ವಾಸಿಸುತ್ತಿದ್ದ ಪ್ರದೇಶಕ್ಕೆ ತೆರಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ವಿಜು ಸುಬ್ರಮಣಿ, ಜಿ.ಪಂ. ಸದಸ್ಯೆ ಲೀಲಾವತಿ, ತಾ.ಪಂ. ಸದಸ್ಯ ಜನೀಶ್, ಬಿ.ಜೆ.ಪಿ. ಜಿಲ್ಲಾ ಪ್ರದಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಸೇರಿದಂತೆ ಇನ್ನಿತರರು ಇದ್ದರು.