ಕುಶಾಲನಗರ, ಸೆ. 18: ವಿದ್ಯಾರ್ಥಿಗಳು ದೃಢ ಸಂಕಲ್ಪ ಕೈಗೊಂಡಲ್ಲಿ ಮಾತ್ರ ನಿರ್ಧಿಷ್ಟ ಗುರಿ ಮುಟ್ಟಲು ಸಾಧ್ಯ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಂ.ಎಂ. ಚರಣ್ ಹೇಳಿದರು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಆಶ್ರಯದಲ್ಲಿ ಸ್ಥಳೀಯ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳು ಹಾಗೂ ಶಿಕ್ಷಣ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದÀರು. ವಿದ್ಯಾರ್ಥಿಗಳು ಪರಿಸರ ಕಾಳಜಿ ಹೊಂದುವದರೊಂದಿಗೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ನಾರಾಯಣ ಪ್ರಾಸ್ತಾವಿಕ ನುಡಿಗಳಾಡಿದರು. ಕಾರ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಲತಾ, ಕನ್ನಡ ಶಿಕ್ಷಕ ಶಿವಣ್ಣ ಮತ್ತು ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವಿ.ಪಿ. ನಾಗೇಶ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಪದಾಧಿಕಾರಿಗಳಾದ ಪಾರ್ವತಿ, ಮಧು, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಇದ್ದರು.
ಅಪ್ಸಾನ ಪ್ರಾರ್ಥಿಸಿದರು, ಪುಷ್ಪಾ ಸ್ವಾಗತಿಸಿದರು.