ಮಡಿಕೇರಿ, ಅ. 21: ನಂಜರಾಯಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಾಲಯದ ವಾರ್ಷಿಕೋತ್ಸವ ತಾ. 24 ಮತ್ತು 25 ರಂದು ಕರಡಿಗೋಡುವಿನ ಶ್ರೀ ರಾಮಚಂದ್ರ ಭಟ್ಟರ ನೇತೃತ್ವದಲ್ಲಿ ನಡೆಯಲಿದೆ.
ತಾ. 24 ರಂದು ಸಂಜೆ 7 ಗಂಟೆಗೆ ಸ್ಥಳ ಶುದ್ಧಿ, ಪಂಚಗವ್ಯ, ಗಣಪತಿ ಪೂಜೆ, ಸಾಮೂಹಿಕ ಪ್ರಾರ್ಥನೆ, ದುರ್ಗಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ತಾ. 25 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ನವಕಲಶ, ಅಲಂಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.