ಮಡಿಕೇರಿ, ಅ. 28 : ಕರಿಕೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಕರಿಕೆ ಗ್ರಾಮ ಪಂಚಾಯಿತಿ ಈ ಬಾರಿ ಕನ್ನಡ ರಾಜ್ಯೋತ್ಸವವನನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ನ.1 ರಂದು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಪಂ ಸದಸ್ಯರು ಹಾಗೂ ಸಮಿತಿ ಸಂಚಾಲಕ ಬಿ.ಎಸ್.ರಮಾನಾಥ್, ನ.1 ರಂದು ನಡೆಯುವ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಅಂದು ಬೆಳಿಗ್ಗೆ ನಿವೃತ್ತ ಶಿಕ್ಷಕ ಬಿ.ಎಲ್. ಬಾಲಕೃಷ್ಣ ಮಾಸ್ಟರ್ ಎಳ್ಳುಕೊಚ್ಚಿಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಕಾಟೂರು ಶಾಲೆಯಿಂದ ಹೊರಡುವ ಭುವನೇಶ್ವರಿ ದೇವಿಯ ಮೆರವಣಿಗೆಗೆ ಹಿರಿಯರಾದ ಮಧುಕರ ಆಚಾರ್ ಚಾಲನೆ ನೀಡಲಿದ್ದಾರೆ.

ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ವರ್ಣರಂಜಿತ ಛತ್ರಿ ಛಾಮರ, ಚಂಡೆವಾದ್ಯ, ಛದ್ಮವೇಷ, ಪÀÇರ್ಣ ಕುಂಭದೊಂದಿಗೆ ವಿದ್ಯಾರ್ಥಿಗಳು ಮಹಿಳೆಯರು ಹಾಗೂ ಪುರುಷರು ಗಮನ ಸೆಳೆÉಯಲಿದ್ದಾರೆ. ಹಿರಿಯ ಸಾಹಿತಿ ಕಯ್ಯಾರ ಕಿಂಞಣ್ಣ ರೈ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ಕರಿಕೆ ಗ್ರಾಪಂ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಹೊಸಮನೆ ಕವಿತಾ ಪ್ರಭಾಕರ್, ತಾಪಂ ಸದಸ್ಯೆ ಎಂ.ಕೆ. ಸಂಧ್ಯಾ, ಗ್ರಾಪಂ ಉಪಾಧ್ಯಕ್ಷ ಶೋಲಿ ಜಾರ್ಜ್ ಉಪಸ್ಥಿತರಿರುವರು.

ರಾಜ್ಯೋತ್ಸವ ಪ್ರಯುಕ್ತ ಛದ್ಮವೇಷ ಸ್ಪರ್ಧೆ, ನಾಡಗೀತೆ ಸ್ಪರ್ಧೆ, ಭಾಷಣ ಸ್ಪರ್ಧೆ, ಓಟದ ಸ್ಪರ್ಧೆ, ಹಗ್ಗಜಗ್ಗಾಟ ಸ್ಪರ್ಧೆ ಸೇರಿದಂತೆ ವೈವಿಧ್ಯಮಯ ಮನೋರಂಜನಾ ಕ್ರೀಡೆÀಗಳು ನಡೆಯಲಿದೆಯೆಂದು ರಮಾನಾಥ್ ತಿಳಿಸಿದರು.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಕಾಳೇಗೌಡ ನಾಗವಾರ ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಸರ್ಕಾರಿ ವಕೀಲ ಎನ್. ಶ್ರೀಧರನ್ ನಾಯರ್, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷÀ ಬಿ.ಎಸ್. ತಮ್ಮಯ್ಯ, ಅರೆಭಾಷಾ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೋಕೇಶ್ ಸಾಗರ್ ಉಪಸ್ಥಿತರಿರುವರು.

ಇದೇ ಸಂದರ್ಭ 2015-16ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಶೃತೀಶ್ ಇವರನ್ನು ಸನ್ಮಾನಿಸಲಾಗುವದು. ಸಭಾ ಕಾರ್ಯಕ್ರಮದ ನಂತರ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದಯೆಂದು ರಮಾನಾಥ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾ.ಪಂ. ಅಧ್ಯಕ್ಷ ಎನ್.ಬಾಲಚಂದ್ರ ನಾಯರ್, ಸಮಿತಿಯ ಕೋಶಾಧಿಕಾರಿ ಹೊಸಮನೆ ಬಲರಾಮ್ ಉಪಸ್ಥಿತರಿದ್ದರು.