ಮಡಿಕೇರಿ, ಅ.14 : ಹೋಂ ಸ್ಟೇಗಳ ನೋಂದಣಿ ಪ್ರಕ್ರಿಯೆಯನ್ನು ಪ್ರವಾಸೋದ್ಯಮ ಇಲಾಖೆÉ ಸರಳೀಕರಣಗೊಳಿಸಿದ್ದು, ನ.15 ರೊಳಗೆ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳುವದು ಕಡ್ಡಾಯವಾಗಿದೆ ಎಂದು ಕೂರ್ಗ್ ಹೋಂ ಸ್ಟೇ ಅಸೋಸಿಯೇಷನ್‍ನ ಮಾಜಿ ಅಧ್ಯಕ್ಷರಾದ ಕರುಂಬಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರವಾಸೋದ್ಯಮ ಸಚಿವರು ಹಾಗೂ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಹೋಂ ಸ್ಟೇ ನೋಂದಣಿ ಪ್ರಕ್ರಿಯೆಯಲ್ಲಿದ್ದ ಗೊಂದಲಗಳನ್ನು ನಿವಾರಿಸುವಲ್ಲಿ ಅಸೋಸಿಯೇಷನ್ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಕ್ಲಿಷ್ಟಕರವಾಗಿದ್ದ ಕೆಲವು ನಿಯಮಗಳನ್ನು ಇದೀಗ ಸರಳೀಕರಣಗೊಳಿಸಲಾಗಿದ್ದು, ಕೇವಲ 500 ರೂ. ಪಾವತಿಸಿ ಹೋಂ ಸ್ಟೇಗಳನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.