ಮಡಿಕೇರಿ, ಸೆ. 1: ತೀವ್ರ ಕುತೂಹಲ ಕೆರಳಿಸಿರುವ ಮಡಿಕೇರಿ ನಗರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ.

ತಾ. 9ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಹೊರÀಬಿದ್ದಿದ್ದು,

ಆಯ್ಕೆಗೆ ದಿನಾಂಕ ನಿಗದಿಪಡಿಸಿ ನಗರಸಭೆ ಚುನಾವಣಾಧಿಕಾರಿಗಳು ಆಗಿರುವ ಉಪವಿಭಾಗಾಧಿ ಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಡಿಕೇರಿ ನಗರಸಭಾ ಅಧ್ಯಕ್ಷ - ಉಪಾಧ್ಯಕ್ಷರ ಮೊದಲನೇ ಆಡಳಿತಾವಧಿ ಕೊನೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಉಪವಿಭಾಗಾಧಿಕಾರಿಗಳು ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ತಾ. 9ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರ ಸ್ವೀಕಾರ, 11 ರಿಂದ 11.30 ರವರೆಗೆ ಪರಿಶೀಲನೆ, 11.30ರಿಂದ 12 ಗಂಟೆಗೆ ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಲಾಗಿದೆ. ಅವಶ್ಯವಿದ್ದಲ್ಲಿ 12 ಗಂಟೆಯಿಂದ ಕೈ ಎತ್ತುವ ಮೂಲಕ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ನಗರಸಭಾ ಸಭಾಂಗಣದಲ್ಲಿ ಈ ಸಂಬಂಧ ವಿಶೇಷ ಸಭೆ ಏರ್ಪಡಿಸಲಾಗಿದೆ.

ಮೀಸಲಾತಿ

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಪುರುಷ ಅಭಿವೃದ್ಧಿಗೆ ಮೀಸಲಾಗಿದ್ದು, ಆಡಳಿತ ಕಾಂಗ್ರೆಸ್ ಹಾಗೂ

(ಮೊದಲ ಪುಟದಿಂದ) ವಿಪಕ್ಷಗಳಲ್ಲಿಯೂ ಸಂಚಲನ ಕಂಡು ಬಂದಿದೆ. ಮೊದಲನೇ ಅವಧಿಗೆ ಅಧ್ಯಕ್ಷ ಸ್ಥಾನ ಬಿಸಿಎಂಬಿ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿತ್ತು. ಒಪ್ಪಂದದಂತೆ ಮೊದಲಿಗೆ ಜುಲೆಕಾಬಿ ಹಾಗೂ ನಂತರ ಶ್ರೀಮತಿ ಬಂಗೇರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಉಪಾಧ್ಯಕ್ಷರಾಗಿ ಲೀಲಾ ಶೇಷಮ್ಮ ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಎಲ್ಲರೂ ಆಕಾಂಕ್ಷಿಗಳಾಗಿದ್ದಾರೆ.