ಸೋಮವಾರಪೇಟೆ, ಜ. 12: ಇಲ್ಲಿನ ಕೊಡವ ಸಮಾಜದ ಆಶ್ರಯದಲ್ಲಿ ತಾ. 14 ರಂದು ಪುತ್ತರಿ ಊರೋರ್ಮೆ ಸಮಾರಂಭ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.

ಸಮಾರಂಭವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಬೋಸ್ ದೇವಯ್ಯ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಸಮಾಜದ ಮಾಜಿ ನಿರ್ದೇಶಕ ಚೊಟ್ಟೆಯಂಡಮಾಡ ಚಂಗಪ್ಪ, ಮೇಜರ್ ಮುಂಡಂಡ ಮಂದಪ್ಪ, ಅಜ್ಜಮಕ್ಕಡ ಉತ್ತಯ್ಯ ಇವರನ್ನು ಸನ್ಮಾನಿಸಲಾಗುವದು ಎಂದು ಅವರು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಟಿಸಿಹೆಚ್, ಡಿಪ್ಲೋಮಾ, ಪದವಿ, ತಾಂತ್ರಿಕ, ಸ್ನಾತಕೋತ್ತರ ಪದವಿಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಸಮಾಜದ ಸದಸ್ಯರ ಮಕ್ಕಳಿಗೆ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ಧನ ನೀಡಲಾಗುವದು. ವಿದ್ಯಾರ್ಥಿಗಳು ಅಂಕ ಪ್ರತಿಯನ್ನು ಕೊಡವ ಸಮಾಜದ ಕಚೇರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಇದೇ ಸಂದರ್ಭ ಶಿರಂಗಳ್ಳಿ ಸ್ವಾಮಿ ವಿವೇಕಾನಂದ ಯುವಕ ಸಂಘದ ಆಶ್ರಯದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅಭಿಮನ್ಯುಕುಮಾರ್ ತಿಳಿಸಿದ್ದಾರೆ.