ಸೋಮವಾರಪೇಟೆ, ಜು. 15: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ನಗರ ಪತ್ರಕರ್ತರ ಸಂಘ ಮತ್ತು ಪತ್ರಿಕಾಭವನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪ್ರತಿಕಾ ದಿನಾಚರಣೆ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮಡಿಕೇರಿ ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ, ಸಂಘದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಎಸ್.ಎ. ಮುರಳೀಧರ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ.ಲೋಕೇಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಸ್. ಮಹೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.