ಸೋಮವಾರಪೇಟೆ, ಜೂ. 21: ಸಮೀಪದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ, ಮುಖೋಪಾಧ್ಯಾಯರಾಗಿ 29 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾದ ಸಿ.ಹೆಚ್. ಕಾಳಯ್ಯ ಅವರನ್ನು ಸಿದ್ಧಾರ್ಥ ನಗರ ಗ್ರಾಮಾಭಿವೃದ್ಧಿ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಶಾಂತಳ್ಳಿ ಸಿದ್ದಾರ್ಥ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಮಂಡಳಿ ಅಧ್ಯಕ್ಷ ಬಿ.ಆರ್. ಧರ್ಮೇಂದ್ರ, ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಬಿ.ಆರ್. ಯೋಗೇಶ್ ಹಾಗೂ ಪದಾಧಿಕಾರಿಗಳು ಸನ್ಮಾನಿಸಿದರು. ಸಮಿತಿ ಪದಾಧಿಕಾರಿಗಳಾದ ಬಿ.ಎನ್. ನಂದೀಶ್, ಬಿ.ಬಿ. ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.