ಮೂರ್ನಾಡು, ಜ. 1: ಜೀವನದಲ್ಲಿ ದೃಢತೆ, ನಿಶ್ಚಿತ ಗುರಿ ಇದ್ದಾಗ ಮಾತ್ರ ಸಾಧನೆಗೈಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ದೃಢತೆ, ನಿಶ್ಚಿತ ಗುರಿ ಅಳವಡಿಸಿಕೊಳ್ಳಲು ಸೂಕ್ತ ತಿಳುವಳಿಕೆ ಮತ್ತು ಮಾರ್ಗದರ್ಶನ ಪÉÇೀಷಕರಿಂದ ದೊರಕಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರೊ. ಮಾಳೇಟಿರ ಬಿ. ಕಾವೇರಪ್ಪ ಹೇಳಿದರು. ಮೂರ್ನಾಡು-ಕೋಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಳೇಟಿರ ನವೀನ್ ಕಾರ್ಯಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ. ಜೆ.ಎ. ಕುಂಞ ಅಬ್ದುಲ್ಲಾ, ಉಪಾಧ್ಯಕ್ಷ ಮುಕ್ಕಾಟೀರ ರವಿ ಚೀಯಣ್ಣ, ಖಜಾಂಚಿ ಬಡುವಂಡ ಬೆಲ್ಲು ಚಿಣ್ಣಪ್ಪ, ನಿರ್ದೇಶಕರಾದ ಬಡುವಂಡ ವಿಜಯ, ಬಡುವಂಡ ಬೋಪಣ್ಣ, ಅವರೆಮಾದಂಡ ಸುಗುಣ ಸುಬ್ಬಯ್ಯ, ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ ಉಪಸ್ಥಿತರಿದ್ದರು. ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪÉÇೀಷಕರಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಿಸ ಲಾಯಿತು. ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ದತ್ತಿ ನಿಧಿ ಬಹುಮಾನಗಳನ್ನು ವಿತರಿಸ ಲಾಯಿತು. ಈ ಸಂದರ್ಭ ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿ ತೀರ್ಥ ತಂಗಮ್ಮ ಮತ್ತು ತಂಡದವರು ಪ್ರಾರ್ಥಿಸಿದರು, ವಿದ್ಯಾರ್ಥಿ ಎನ್.ಎ. ಸೂಫಿಯಾನ ಸ್ವಾಗತಿಸಿ, ಬಿ.ಟಿ. ಹರ್ಷಿತ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅಬ್ದುಲ್ಲಾ ಶಾಲಾ ವಾರ್ಷಿಕ ವರದಿ ವಾಚಿಸಿ, ಬಿ.ಎಲ್. ಅಕ್ಕಮ್ಮ ವಂದಿಸಿದರು. ನಂತರ ಜರುಗಿದ ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ನೆರೆದ ಪÉÇೀಷಕರ, ಸಾರ್ವಜನಿಕರ ಮನರಂಜಿಸಿದವು.