ಸೋಮವಾರಪೇಟೆ, ಆ. 8: ಇಂದಿನ ಸ್ಪರ್ಧಾಯುಗದಲ್ಲಿ ಪರಿಪೂರ್ಣ ವ್ಯಕ್ತಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಐಗೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್. ಉಮೇಶ್ ಅವರು ಹೇಳಿದರು. ಕಾಲೇಜಿನಲ್ಲಿ 2016-17ನೇ ಸಾಲಿನ ಸಾಂಸ್ಕøತಿಕ ಮತ್ತು ಕ್ರೀಡಾ ಘಟಕ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಅವರು ಮಾತನಾಡಿ ದರು. ಸಂಘ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಗಳು ತಮ್ಮನ್ನು ತೊಡಗಿಸಿಕೊಳ್ಳುವದ ರಿಂದ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಅನುಕೂಲವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆ ಗಳೂ ಮುಖ್ಯವಾಗಿದ್ದು, ತಮ್ಮಲ್ಲಿನ ಪ್ರತಿಭೆಯನ್ನು ಹೊರತರಲು ಇಂತಹ ವೇದಿಕೆಗಳು ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಜೆ. ಜವರಪ್ಪ ಉದ್ಘಾಟಿಸಿ ಮಾತನಾಡಿ, ಪಿಯುಸಿ ವಿದ್ಯಾಭ್ಯಾಸವು ಒಬ್ಬ ವ್ಯಕ್ತಿಯ ಮುಂದಿನ ಜೀವನ ರೂಪಿಸಿಕೊಳ್ಳಲು ಪ್ರಮುಖ ಘಟ್ಟವಾಗಿದೆ. ಉಜ್ವಲ ಭವಿಷ್ಯಕ್ಕಾಗಿ ಇಂದಿನಿಂದಲೇ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶ್ವಂತ್ ಮಾತನಾಡಿ, ಶಾಲಾ ಕಾಲೇಜಿನ ಸಂಘಗಳು ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗಾಗಿ ಸಕ್ರಿಯ ವಾಗಿರಬೇಕು. ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಸಂಘಗಳ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ಸ್ವಾಮಿ, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕ್ರೀಡೆಗಳಲ್ಲಿ ಗೆಲುವುಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.