ಮಡಿಕೇರಿ, ಜ. 22: ಈ ಸಂಸ್ಥೆಗಳ ಸಂಪೂರ್ಣ ಸಹಕಾರದೊಂದಿಗೆ ಇತ್ತೀಚೆಗೆ ನಗರದ ಅಶ್ವಿನೀ ಆಸ್ಪತ್ರೆಯಲ್ಲಿ 40ನೇ ವಾರ್ಷಿಕೋತ್ಸವದ ಪ್ರಯುಕ್ತ 30ನೇ ವರ್ಷದ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಂಡವರಿಗೆ ಅಶ್ವಿನೀ ಆಸ್ಪತ್ರೆ ಹಾಗೂ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸ್ವಯಂ ಸೇವಾ ಸಂಸ್ಥೆಯಲ್ಲಿ, ಉಚಿತವಾಗಿ ನೇತ್ರ ಪುನರ್ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಬಹುತೇಕ ಎಲ್ಲಾ ಶಿಬಿರಾರ್ಥಿಗಳು ಪಾಲ್ಗೊಂಡಿದ್ದು ಶಸ್ತ್ರಚಿಕಿತ್ಸೆಗೆ ಒಳಪಟ್ಟ ತಮ್ಮ ಕಣ್ಣುಗಳನ್ನು ಪರೀಕ್ಷಿಸಿಕೊಂಡರು.