ಶನಿವಾರಸಂತೆ, ಆ. 30: ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ತಾಲೂಕು ಪಂಚಾಯಿತಿ ಸದಸ್ಯೆ ಲೀಲಾವತಿ ಅಭಿಪ್ರಾಯಪಟ್ಟರು.ಸಮೀಪದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಂಡ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಚೇತನ್ ಮಾತನಾಡಿ, ಸರಕಾರಿ ಶಾಲೆಗಳ ಮಕ್ಕಳಲ್ಲೂ ಬಹುಮುಖ ಪ್ರತಿಭೆಯಿದೆ. ಸರಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಒಂದು ಪೈಸೆ ಖರ್ಚು ಮಾಡುತ್ತಿಲ್ಲ. ಶಾಲಾಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ನಡೆಸುವಂತಾಗಿದೆ ಎಂದು ವಿಷಾದಿಸಿದರು.

ಗ್ರಾ.ಪಂ. ಸದಸ್ಯರಾದ ವಿಜಯಕುಮಾರ್, ನಟೇಸ್, ಮುಖ್ಯ ಶಿಕ್ಷಕಿಯರಾದ ಇಂದಿರಾ, ಯಶೋದಾ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿ ಸದಸ್ಯರಾದ ಸುಬ್ಬಪ್ಪ, ಮಹೇಶ್, ಹಂಡ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಧುಕುಮಾರ್, ಸಹ ಶಿಕ್ಷಕರಾದ ದಿನೇಶ್, ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ಹಂಡ್ಲಿ ಕ್ಲಸ್ಟರ್ ವ್ಯಾಪ್ತಿಯ 10 ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.