ಸೋಮವಾರಪೇಟೆ, ಜೂ. 19: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಜನಾಂಗದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2015-16ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕೂ ಹೆಚ್ಚು ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪುರಸ್ಕಾರ ಪಡೆಯಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳು ಸ್ವ-ವಿವರಗಳೊಂದಿಗೆ ಇತ್ತೀಚಿನ ಒಂದು ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರಗಳೊಂದಿಗೆ ಅಖಿಲ ಭಾರತ ವೀರಶೈವ ಮಹಾಸಭಾ, ನಂ. 17/4, ‘ವೀರಶೈವ ಲಿಂಗಾಯತ ಭವನ’, ರಮಣಮಹರ್ಷಿ ರಸ್ತೆ, ಸದಾಶಿವ ನಗರ, ಬೆಂಗಳೂರು 560 080 ಈ ವಿಳಾಸಕ್ಕೆ ತಾ. 25 ರೊಳಗೆ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಮಹಾಸಭಾದ ಜಿಲ್ಲಾಧ್ಯಕ್ಷ ಡಿ.ಬಿ. ಧರ್ಮಪ್ಪ, ಮೊ.ಸಂ. 9449987494 ಅಥವಾ ಜಿಲ್ಲಾ ಕಾರ್ಯದರ್ಶಿ ಕಾಂತರಾಜ್ ಮೊ. ಸಂ. 9448716222ರಲ್ಲಿ ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.