ಮಡಿಕೇರಿ, ಡಿ. 1: ಮಾನವನಿಗೆ ಆರೋಗ್ಯವೆಂಬದು ಅಮೂಲ್ಯ ಸಂಪತ್ತು. ಆದ್ದರಿಂದ ಆರೋಗ್ಯವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಪ್ರತಿಯೊಬ್ಬರು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಸಲಹೆಯಿತ್ತರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಮಡಿಕೇರಿ, ರೋಟರಿ ಮಿಸ್ಟಿ ಹಿಲ್ಸ್, ಓಡಿಪಿ - ಸ್ನೇಹಾಶ್ರಯ ಸಮಿತಿ ಹಾಗೂ ಸರ್ವೋದಯ ಹೆಚ್‍ಐವಿ ಭಾಧಿತರ ಸಂಪರ್ಕ ಜಾಲ, ಆಶೋದಯ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ‘ವಿಶ್ವ ಏಡ್ಸ್ ದಿನ -2016’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯಕರ ಹವ್ಯಾಸಗಳನ್ನು ಬೆಳೆಸಿಕೊಂಡು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವಂತೆ ಹರೀಶ್ ಹೇಳಿದರು.

ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸಮಾಜದಲ್ಲಿ ಹೆಚ್‍ಐವಿ ಸೋಂಕಿತರನ್ನು ನಿರ್ಲಕ್ಷಿಸಬಾರದು. ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು. ಜಿಲ್ಲಾಧಿಕಾರಿ ಆರ್.ವಿ. ಡಿಸೋಜ ಮಾತನಾಡಿ, ಹೆಚ್‍ಐವಿ ಸೋಂಕಿಗೆ ಚಿಕಿತ್ಸೆಯಿದೆ.