ಮೂರ್ನಾಡು, ಜೂ. 26: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ 29 ವರ್ಷಗಳ ಕಾಲ ಉಪನ್ಯಾಸಕರಾಗಿ ಹಾಗೂ 1 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ಬಿ. ಪುಟ್ಟಣ್ಣ ಅವರನ್ನು ಕಾಲೇಜಿನ ಉಪನ್ಯಾಸಕ ವೃಂದದವರು ಸನ್ಮಾನಿಸಿ ಬೀಳ್ಕೊಟ್ಟರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಕಾಲೇಜು ಉಪನ್ಯಾಸಕ ವೃಂದದವರು ಹಾಜರಿದ್ದರು. ಈ ಸಂದರ್ಭ ಸ್ವಯಂ ನಿವೃತ್ತರಾದ ಉಪನ್ಯಾಸಕಿ ಶಾಂತ ಹಾಗೂ ರೋಶನ್ ಅವರಿಗೆ ಕಿರುಕಾಣಿಕೆ ನೀಡಿ ಬೀಳ್ಕೊಡಲಾಯಿತು.