ಮೂರ್ನಾಡು, ಜು. 14: ಮೂರ್ನಾಡು ವಿದ್ಯಾಸಂಸ್ಥೆಯ ಪ.ಪೂ.ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಪ್ರಾಂಶುಪಾಲರಿಗೆ, ಉಪನ್ಯಾಸಕರಿಗೆ ವಿದ್ಯಾಸಂಸ್ಥೆ ವತಿಯಿಂದ ಬೀಳ್ಕೊಡಲಾಯಿತು.ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಎಂ.ಬಿ. ಪುಟ್ಟಣ್ಣ, ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಬಿ.ಡಿ. ನಾಗರಾಜ್ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶಾಂತ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚ್ಚೆಟ್ಟಿರ ಮಾದಪ್ಪ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಈರಮಂಡ ಸೋಮಣ್ಣ, ಪುದಿಯೊಕ್ಕಡ ಸುಬ್ರಮಣಿ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಎ.ಎಂ. ಶೈಲಾ, ನಂದೇಟಿರ ರಾಜ ಮಾದಪ್ಪ, ಬಡುವಂಡ ಸುಬ್ರಮಣಿ, ಲಾಲು ಮುದ್ದಯ್ಯ, ಕಮಲು ಮುದ್ದಯ್ಯ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸಿ.ಜೆ. ಪ್ರಿಯ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್ ಉಪಸ್ಥಿತರಿದ್ದರು.