ಮಡಿಕೆÉೀರಿ, ಜ. 29: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿ ಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿ ಫೆ. 4 ಮತ್ತು 5 ರಂದು ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಡಾ. ಮೋಹನ್ ಅಪ್ಪಾಜಿ, ರಾಜ್ಯ ಬ್ಯಾಡ್ಮಿಂಟನ್ ಅಸೋಸಿ ಯೇಷನ್ ಹಾಗೂ ಜಿಲ್ಲಾ ಸಂಸ್ಥೆಯ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದರು. ಪಂದ್ಯಾವಳಿ ಕೊಡಗು ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ ವಾಗಿದ್ದು, ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರು ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರು ಸ್ಪರ್ಧಿಸ ಬಹುದಾಗಿದೆ ಎಂದರು.
ಪಂದ್ಯಾವಳಿ ತಂಡ ಮಾದರಿಯಲ್ಲಿ ನಡೆಯಲಿದ್ದು, ಪ್ರಮುಖವಾಗಿ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿ, ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಒಟ್ಟು ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಪಂದ್ಯಾವಳಿಗೆ ಪ್ರತಿ ವಿಭಾಗದಿಂದ ಐವರು ವಿದ್ಯಾರ್ಥಿಗಳಂತೆ ಪ್ರತಿ ಶಾಲೆಯಿಂದ 20 ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶÀವಿದೆ ಎಂದರು. ಪ್ರತಿ ವಿಭಾಗದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್ ಪಂದ್ಯಗಳು ನಡೆಯುತ್ತವೆ. ಈ ಎರಡೂ ಪಂದ್ಯಗಳಲ್ಲಿ ತಲಾ ಒಂದೊಂದು ಪಂದ್ಯವನ್ನು ಒಂದೊಂದು ತಂಡ ಗೆದ್ದಲ್ಲಿ.
ವಿಜೇತ ತಂಡವನ್ನು ನಿರ್ಧರಿಸಲು ಮಿಕ್ಸ್ಡ್ ಡಬಲ್ಸ್ ಪಂದ್ಯವನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ನಾಲ್ಕು ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಶಾಲೆಗೆ ಇದೇ ಮೊದಲ ಬಾರಿಗೆ ರೋಲಿಂಗ್ ಚಾಂಪಿಯನ್ ಟ್ರೋಫಿಯನ್ನು ನೀಡಲಾಗುತ್ತದೆ. ಬ್ಯಾಡ್ಮಿಂಟನ್ ಆಟಗಾರರಾದ ದಿ. ಚೌರೀರ ಮಧು ಮೇದಪ್ಪ ಅವರ ಸ್ಮರಣಾರ್ಥ ಅವರ ಪತ್ನಿ ಬೊಳ್ಳು ಮೇದಪ್ಪ ಅವರು ರೋಲಿಂಗ್ ಟ್ರೋಫಿಯನ್ನು ನೀಡುತ್ತಿದ್ದಾರೆ ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿರುವ ಶಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಿಂದ ಹೆಚ್ಚು ಕ್ರೀಡಾಪಟುಗಳು ಬ್ಯಾಡ್ಮಿಂಟನ್ನತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ಮೋಹನ್ ಅಪ್ಪಾಜಿ ಅಭಿಪ್ರಾಯಪಟ್ಟರು.
ಸಂಘದ ಖಜಾಂಚಿ ರವಿ ಮಾತನಾಡಿ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕ್ರೀಡಾ ಪ್ರತಿಭೆÉಗಳು ವಿಫುಲವಾಗಿದ್ದು, ಇಂತಹ ಪಂದ್ಯಾವಳಿಗಳ ಮೂಲಕ ಕ್ರೀಡಾ ಪ್ರತಿಭೆÉಗಳನ್ನು ಪತ್ತೆ ಹಚ್ಚಿ ತರಬೇತಿ ನೀಡಿದಲ್ಲಿ ಅವರ ಪ್ರತಿಭೆ ಅನಾವರಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ತರಬೇತುದಾರ ಮೇದುರ ಅರುಣ್ ಪೆಮ್ಮಯ್ಯ, ವಿನೋದ್ ಉತ್ತಪ್ಪ, ಸದಸ್ಯರಾದ ಮೋಹನ್ ಹಾಗೂ ರೊಟೇರಿಯನ್ ಮಂದಣ್ಣ ಉಪಸ್ಥಿತರಿದ್ದರು.