ಮಡಿಕೇರಿ, ಜು. 23: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಸಂಗೀತ, ನೃತ್ಯ ಮತ್ತಿತರ ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ, ಅಧ್ಯಯನ ಮಾಡಲು 2016-17ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಪರಿಣಿತ ಕಲಾವಿದರು, ತಜ್ಞರಿಂದ ಸಂಶೋಧನೆಗಾಗಿ ಫೆಲೋಶಿಪ್‍ಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಂಶೋಧನೆ ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು 5-6 ಪುಟಗಳ ಲೇಖನವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅಧ್ಯಯನದ ಅವಧಿ ಆರು ತಿಂಗಳು. ಒಟ್ಟು ಫೆಲೋಶಿಪ್‍ಗಳು-ಇಪ್ಪತ್ತು, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು. ಆಯ್ಕೆಯಾದವರಿಗೆ ರೂ. 1 ಲಕ್ಷ ಸಂಶೋಧನಾ ನೆರವನ್ನು ನೀಡಲಾಗುವದು.

ಆಯ್ಕೆಯಲ್ಲಿ ಅಕಾಡೆಮಿ ತೀರ್ಮಾನವೇ ಅಂತಿಮ. ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು. ಅರ್ಜಿಯ ಜೊತೆ ಸೂಚನೆಯ ಪ್ರತಿ ನೀಡಲಾಗಿದೆ. ಅಂಚೆ ಮೂಲಕ ಅರ್ಜಿ ಪಡೆಯಲಿಚ್ಛಿಸುವರು (ರೂ. 10 ಮಾತ್ರ) ಸ್ಟಾಂಪ್ ಹಚ್ಚಿದ ಸ್ವ ವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-56002 ಇಲ್ಲಿಗೆ ಕಳುಹಿಸಬಹುದಾಗಿದೆ. ಈ-ಮೇಲ್ ಞಚಿಡಿಟಿಚಿಣಚಿಞಚಿ sಚಿಟಿgeeಣhಚಿ@gmಚಿiಟ.ಛಿom ಅರ್ಜಿಗಳನ್ನು ಅಕಾಡೆಮಿಗೆ ಕಳುಹಿಸಿಕೊಡಲು ತಾ. 25 ಕೊನೆಯ ದಿನ ಆಗಿರುತ್ತದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ತಿಳಿಸಿದ್ದಾರೆ.