ಮಡಿಕೇರಿ, ಅ. 7: ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ತಾ. 8ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಭಾಲಭವನದಲ್ಲಿ ನಡೆಯಲಿದೆ. ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕವಿಗೋಷ್ಠಿ ನಡೆಯಲಿದೆ.ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉದ್ಘಾಟನೆ ಮಾಡಲಿದ್ದು, ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಗರಸಭಾ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ ಕವನ ಸಂಕಲನ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ, ಖಜಾಂಚಿ ಅನಿತಾ ಪೂವಯ್ಯ, ನಗರಸಭಾ ಆಯುಕ್ತೆ ಪುಷ್ಪಾವತಿ ಭಾಗವಹಿಸಲಿದ್ದಾರೆ.