ಮಡಿಕೇರಿ, ಜೂ. 11: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ನಗರ ಸಭೆ ಮತ್ತು ಓ.ಡಿ.ಪಿ. ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯ ಬಗ್ಗೆ ಕಾನೂನು ಕಾರ್ಯಾಗಾರ ನಡೆಯಲಿದೆ.

ಇದೇ ಸಂದರ್ಭ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್‍ಕೆಜಿಎಂಎಂ ಮಹಾಸ್ವಾಮೀಜಿ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ. ಪವನೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ .ರಾಜೇಂದ್ರ ಪ್ರಸಾದ್, ಜಿ.ಪಂ. ಸಿಇಓ ಚಾರುಲತಾ ಸೋಮಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ ಪ್ರಭು, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ನಗರಸಭೆ ಪೌರಾಯುಕ್ತೆ ಬಿ.ಬಿ. ಪುಷ್ಪಾವತಿ ಮತ್ತಿತರರು ಭಾಗವಹಿಸಲಿದ್ದಾರೆ.