ಸೋಮವಾರಪೇಟೆ, ಜ. 28: ಇಲ್ಲಿನ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪಕ್ಷದ ಕಚೇರಿಯಲ್ಲಿ ದೇಶದ ಪ್ರಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿ, ದೇಶಭಕ್ತಿ ಹಾಗೂ ಶಿಸ್ತಿಗೆ ಹೆಸರಾದ ಕಾರ್ಯಪ್ಪ ಅವರ ಬದುಕು ಎಲ್ಲರಿಗೂ ಸ್ಪೂರ್ತಿಯಾಗಿದ್ದು, ಇಡೀ ವಿಶ್ವವೇ ಹೆಮ್ಮೆಪಡುವಂತಹ ಮಹಾನ್ ನಾಯಕರ ಬದುಕು ನಮಗೆಲ್ಲರಿಗೂ ದಾರಿದೀಪವಾಗಿದೆ ಎಂದರು.

ಈ ಸಂದರ್ಭ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಮನುಕುಮಾರ್ ರೈ, ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ಪ್ರಮುಖರಾದ ಎಂ.ಪಿ. ರಮೇಶ್, ಪಿ. ಮಧು, ಮಸಗೋಡು ಸತೀಶ್, ಸಂತೋಷ್ ರೈ, ದಯಾನಂದ್ ಸೇರಿದಂತೆ ಇತರರು ಭಾಗವಹಿಸಿದ್ದರು.