ಮಡಿಕೇರಿ, ಸೆ. 26: ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಇತ್ತೀಚೆಗೆ ಜಮ್ಮು - ಕಾಶ್ಮೀರದ ಉರಿ ಎಂಬಲ್ಲಿ ಉಗ್ರವಾದಿಗಳ ಗುಂಡಿಗೆ ಹುತಾತ್ಮರಾದ ದೇಶದ 18 ಮಂದಿ ವೀರಯೋಧರಿಗೆ ನಮನ ಸಲ್ಲಿಸಲಾಯಿತು.ನಗರದ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಅಗಲಿದ ಯೋಧರಿಗೆ ಶಾಂತಿ ಕೋರಿ ಮೌನಾಚರಣೆ ಸಲ್ಲಿಸಲಾಯಿತು. ಈ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಳನ ರವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಧು ಕಿಬ್ಬೆಟ್ಟ, ಮಾಚಿಮಾಡ ಗಪ್ಪಣ್ಣ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಹಾಗೂ ಇನ್ನಿತರರು ಇದ್ದರು.

ಮಹಿಳಾ ಮೋರ್ಚಾದಿಂದ ಶ್ರದ್ಧಾಂಜಲಿ

ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದಲೂ ಶ್ರದ್ಧಾಂಜಲಿ ಅರ್ಪಿಸಲಾಯಿತು. ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಅಗಲಿದ ಯೋಧರಿಗೆ ಅಶ್ರುತರ್ಪಣ ಅರ್ಪಿಸಿದರು. ಮಹಿಳಾ ಮೋರ್ಚಾದ ಅಧ್ಯಕ್ಷ ಯಮುನ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಗೀತಾ ಪವಿತ್ರ, ಅಜ್ಜೇಟ್ಟಿರ ಪಳಂಗಪ್ಪ, ಮಡಿಕೇರಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ಬೆಳ್ಯಪ್ಪ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ ಉಪಸ್ಥಿತರಿದ್ದರು.