ಸುಂಟಿಕೊಪ್ಪ, ಆ. 1 : ಕಂಬಿಬಾಣೆ ಗ್ರಾಮ ಪಂಚಾಯಿತಿಗೆ ಸೇರಿದ ಅತ್ತೂರು-ನಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಡಿ.ಎಸ್.ಕಮಲಾಕ್ಷಿ ಅವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಾಲೆಯ ಶಿಕ್ಷಕ ವೃಂದದವರಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಅತ್ತೂರು ನಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಿ.ಎಸ್.ಕಮಲಾಕ್ಷಿ ತಾ. 30 ರಂದು ಶಿಕ್ಷಕಿಯಾಗಿ ನಿವೃತ್ತಿಗೊಂಡಿದ್ದು ಅವರಿಗೆ ಎಸ್ಡಿಎಂಸಿ ಹಾಗೂ ಶಾಲೆಯ ಶಿಕ್ಷಕರು ಸನ್ಮಾನಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸೌಭಾಗ್ಯ ಮಾತನಾಡಿ ಸರಕಾರಿ ಶಿಕ್ಷಣ ಇಲಾಖೆಯಲ್ಲಿ ತರುತ್ತಿರುವ ಹೊಸ ನಿಯಮÀದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರು ವದರಿಂದ ಪ್ರಸ್ತುತ ದಿನಗಳಲ್ಲಿ ಶಿಕ್ಷಕರು ಒತ್ತಡದಿಂದ ಕಾರ್ಯ ನಿರ್ವಹಿಸುತ್ತಿದ್ದರೂ, ಶಿಕ್ಷಕರು ವೃತ್ತಿ ನಿಷ್ಠೆಯಿಂದ ಸುಸೂತ್ರವಾಗಿ ಸೇವೆ ಸಲ್ಲಿಸುತ್ತಿರುವದು ಶ್ಲಾಘನೀಯ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಾಫ ವಹಿಸಿದ್ದರು.ನಿವೃತ್ತ ಶಿಕ್ಷಕಿ ಕಮಲಾಕ್ಷಿ ಮಾತನಾಡಿ ತನ್ನ ಸೇವಾವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ ತೃಪ್ತಿ ತನಗಿದೆ ಸಯೋದ್ಯೋಗಿಗಳ ಸಲಹೆ ಸಹಕಾರದಿಂದ ಶಿಕ್ಷಕ ವೃತ್ತಿಯಲ್ಲಿ ನೆಮ್ಮದಿ ಲಭಿಸಿದೆ ಎಂದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪುರುಷೋತ್ತಮ ಕಂಬಿಬಾಣೆ ಗ್ರಾ.ಪಂ. ಅಧ್ಯಕ್ಷ ಕೆ.ಬಿ.ಕೃಷ್ಣ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜನ್, ಸುಂಟಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕಿ ಗೀತಾ, ಹೇಮಾವತಿ, ಸುಭಾಷ್ ಯುವಕ ಸಂಘದ ಕಾರ್ಯದರ್ಶಿ ಮೊೈದು, 7ನೇ ಹೊಸಕೋಟೆ ಶಾಲೆಯ ಮುಖ್ಯ ಶಿಕ್ಷಕಿ ಅತ್ತೂರು-ನಲ್ಲೂರು ಶಾಲೆಯ ಮುಖ್ಯ ಶಿಕ್ಷಕಿ ನತಾಲಿಯ ಡಿಸೋಜ, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು ಯುವಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.