ಮಡಿಕೇರಿ, ಆ. 19: ಭಾರತ ಆಕ್ರಮಿತ ಕಾಶ್ಮೀರ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಬಿ.ಜೆ.ಪಿ. ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಡಿಕೇರಿ ತಾಲೂಕು ಅಧ್ಯಕ್ಷ ತಳೂರು ಎ.ಕಿಶೋರ್‍ಕುಮಾರ್, ನಗರ ಅಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ಯುವ ಮೋರ್ಚಾ ಖಜಾಂಚಿ ಕೀರ್ತನ್ ಕಡ್ಲೇರ, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷÀ ಎಸ್.ಸಿ.ಸತೀಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಡೀನ್ ಬೋಪಣ್ಣ, ನಗರ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್, ಸುಬ್ರಮಣಿ, ಬಿ.ಕೆ. ಜಗದೀಶ್, ನಗರ ಯುವ ಮೋರ್ಚಾ ಅಧ್ಯಕ್ಷ ಡಿಶು ಪೂವಪ್ಪ, ಜಿಲ್ಲಾ ಕಾರ್ಯದರ್ಶಿ ಅರುಣ್ ಕುಮಾರ್, ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.