ಮೂರ್ನಾಡು, ನ. 16: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಛದ್ಮವೇಷ ಸ್ಪರ್ಧೆ ನಡೆಯಿತು.ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ವಿದ್ಯಾಸಂಸ್ಥೆ ಹಾಗೂ ಮಡಿಕೇರಿ ವ್ಯಾಂಡಮ್ ಎಂಟರ್ ಪ್ರೈಸಸ್ ವತಿಯಿಂದ ಆಯೋಜಿಸ ಲಾದ ಕಾರ್ಯಕ್ರಮವನ್ನು ವ್ಯಾಂಡಮ್ ಎಂಟರ್ ಪ್ರೈಸಸ್ ಮಾಲೀಕ ದಾಮೋದರ್ ಉದ್ಘಾಟನೆ ಮಾಡಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ ಮುಖ್ಯ ಅತಿಥಿಗಳಾಗಿ ಮಾತನಾಡಿ ವಿದ್ಯಾಸಂಸ್ಥೆ ಮಾಧ್ಯಮ ವರ್ಗದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿ ವಿದ್ಯಾಸಂಸ್ಥೆ ಹೊಂದಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ವಿದ್ಯಾಸಂಸ್ಥೆ ನಿರಂತರ ಶ್ರಮಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ನಾಯಕ ಕವನ್ ಕಾಳಯ್ಯ ವಹಿಸಿದರು. ಶಾಲಾ ಉಪ ನಾಯಕಿ ದಿಯ ದೇವಯ್ಯ, ಕ್ರೀಡಾನಾಯಕ ಚಿಂತನ್ ನಾಣಯ್ಯ, ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಎಸ್. ಮುದ್ದಪ್ಪ, ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಈರಮಂಡ ಸೋಮಣ್ಣ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್ ಉಪಸ್ಥಿತರಿದ್ದರು.

ಎಲ್‍ಕೆಜಿಯಿಂದ ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳು ವಿವಿಧ ರೀತಿಯ ವೇಷ ಭೂಷಣ ಧರಿಸಿ ಗಮನ ಸೆಳೆದರು. ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಈಶ್ವರ, ಛತ್ರಪತಿ ಶಿವಾಜಿ, ಮಹಾತ್ಮ ಗಾಂಧಿ, ಸಾನಿಯಾ ಮಿರ್ಜಾ, ಜವಹಾರಲಾಲ್ ನೆಹರು ಹೀಗೆ ಹತ್ತು ಹಲವು ವೇಷಗಳನ್ನು ಧರಿಸಿದ ಪುಟಾಣಿ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಖುಷಿ ಪಟ್ಟರು. ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಂಶುಪಾಲೆ ಸಿ.ಜೆ. ಪ್ರಿಯ, ಪ್ರಾಧ್ಯಾಪಕ ಮುದ್ದಪ್ಪ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ದಮಯಂತಿ ಛದ್ಮವೇಷ ಸ್ಪರ್ಧೆಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿ ದರು. ದಿನಾಚರಣೆ ಅಂಗವಾಗಿ ಮಕ್ಕಳಿಗೆ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಶಿಕ್ಷಕಿ ರೇಷ್ಮ ಸುಬ್ಬಯ್ಯ ಸ್ವಾಗತಿಸಿ, ಶೃತಿ ಕಾರ್ಯಕ್ರಮ ನಿರೂಪಿಸಿ, ನಿಶಿತ ಚಂಗಪ್ಪ ವಂದಿಸಿದರು.