ಗೋಣಿಕೊಪ್ಪಲು, ನ. 29: ಮಡಿಕೇರಿ ಓಂಕಾರ ಸದನದಲ್ಲಿ ಡಿ. 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸುತ್ತಿದ್ದು ಜಿಲ್ಲೆಯ ಮೂರು ತಾಲೂಕಿನ ವಿಕಲಚೇತನರು ಪಾಲ್ಗೊಳ್ಳಲಿರುವ ದಾಗಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಎನ್.ಎಂ.ಜಗದೀಶ್ ತಿಳಿಸಿದ್ದಾರೆ.

ಗೋಣಿಕೊಪ್ಪಲು ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇಂದು ಜರುಗಿದ ವೀರಾಜಪೇಟೆ ತಾಲೂಕು ಮಟ್ಟದ ವಿಕಲಚೇತನರ ಕ್ರೀಡಾ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಅವರು ಶೇ. 40ಕ್ಕೂ ಅಧಿಕ ಅಂಗ ಊನಗೊಂಡ ಎಲ್ಲರಿಗೂ ಗುರುತಿನ ಚೀಟಿ ಹಾಗೂ ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುವದು ಎಂದು ಹೇಳಿದರಲ್ಲದೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

ಮಡಿಕೇರಿಯಲ್ಲಿ ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಡಿಕೇರಿ ವಿಧಾನ ಸಭಾ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆ ಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಕೊಡಗು ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್, ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಕೊಡಗು ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಕರ್ನಾಟಕ ರೇಷ್ಮೆ ಮಹಾ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೆÇನ್ನಪ್ಪ, ಕೊಡಗು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಂ.ಕೆ. ವಿಜು ಸುಬ್ರಮಣಿ, ಮಡಿಕೇರಿ ನಗರ ಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ. ಆರ್.ವಿ. ಡಿಸೋಜಾ, ಜಿಲ್ಲಾ ಪೆÇಲೀಸ್ ಅಧೀಕ್ಷಕ ರಾಜೇಂದ್ರ ಪ್ರಸಾದ್ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್‍ಪ್ರಭು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್. ನಾಗರಾಜ್ ಮತ್ತು ಕೊಡಗು ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ ಭಾಗವಹಿಸಲಿದ್ದಾರೆ.

ಗೋಣಿಕೊಪ್ಪಲಿನಲ್ಲಿ ಯಶಸ್ವಿ ಆಚರಣೆ

ಗೋಣಿಕೊಪ್ಪಲಿನಲ್ಲಿ ಇಂದು ಜರುಗಿದ ವೀರಾಜಪೇಟೆ ತಾಲೂಕು ಮಟ್ಟದ ವಿಕಲೇತನರ ಕ್ರೀಡಾ ಕೂಟದಲ್ಲಿ ಸುಮಾರು 75ಕ್ಕೂ ಅಧಿಕ ವಿಕಲಚೇತನರು ಪಾಲ್ಗೊಂಡು ಸಂಭ್ರಮಿಸಿದರು. ಇಂದಿನ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ವಿಜೇತರಿಗೆ ಮಡಿಕೇರಿ ಯಲ್ಲಿ ಡಿ.3 ರಂದು ಬಹುಮಾನ ವಿತರಣೆ ಮಾಡಲಾಗುವದು ಎಂದು ಜಗದೀಶ್ ತಿಳಿಸಿದ್ದಾರೆ.

ದೇವರಪುರ ಅಮೃತವಾಣಿಯ ಸಿಸ್ಟರ್ ಲೀನಾ, ಪಾಲಿಬೆಟ್ಟ ಚೆಷೈರ್ ಹೋಮ್‍ನ ಪ್ರಾಂಶುಪಾಲ ಶಿವರಾಜ್ ಅವರು ಕಾರ್ಯಕ್ರಮ ಯಶಸ್ವಿಯಲ್ಲಿ ಸಹಕಾರ ನೀಡಿದ್ದು, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಗ್ರಾ.ಪಂ. ಅಧ್ಯಕ್ಷೆ ಸೆಲ್ವಿ, ಮಹಿಳಾ ಸಮಾಜ ಅಧ್ಯಕ್ಷೆ ಸುಮಿ ಸುಬ್ಬಯ್ಯ, ಪೆÇನ್ನಂಪೇಟೆ ನಿಸರ್ಗ ಜೆಸಿಐ ಅಧ್ಯಕ್ಷ ಕಿರಣ್, ತಾ.ಪಂ.ಸದಸ್ಯ ಜಯಪೂವಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ, ಲೀಲಾವತಿ ಮುಂತಾದವರು ಪಾಲ್ಗೊಂಡಿದ್ದರು. ಗೋಣಿಕೊಪ್ಪಲು ಸತ್ಯ ಸಾಯಿ ಟೃಸ್ಟ್‍ನ ಅಧ್ಯಕ್ಷ ಬಿದ್ದಾಟಂಡ ಸಾಬು ಕಾವೇರಪ್ಪ, ಚೆಪ್ಪುಡಿರ ಪ್ರಥ್ಯು ಪೂಣಚ್ಚ, ಆದೇಂಗಡ ನಂದ, ಶಶಿ ಉತ್ತಪ್ಪ, ಸೀತಾ ಅಶೋಕ್ ಹಾಗೂ ಸರಿತಾ ನಳ ಮುಂತಾದವರು ಪ್ರಾಯೋಜನೆ ಒದಗಿಸಿದ್ದರು.