ಮಡಿಕೇರಿ, ಜ. 30: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಆಶಯದಂತೆ ಮದ್ಯ ಮುಕ್ತ ಸಮಾಜ ನಿರ್ಮಾಣ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹದಿಹರಯದಲ್ಲಿ ಸಾವನ್ನಪ್ಪುವ ಘಟನೆಗಳಿಗೆ ಮದ್ಯಪಾನವೇ ಕಾರಣವಾಗಿದ್ದು, ಸರಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಮದ್ಯಪಾನ ನಿಷೇಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.