ಮಡಿಕೇರಿ, ಸೆ. 18: ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಗೌಡ ಸಮಾಜ ಮರಗೋಡು ಇವರ ಸಹಯೋಗ ದಲ್ಲಿ ತಾ.13-18ರವರೆಗೆ ಮರಗೋಡು ಗೌಡ ಸಮಾಜದಲ್ಲಿ ನಡೆದ ಅರೆಭಾಷೆ ಸಂಸ್ಕøತಿಯಲ್ಲಿ ಸಾಂಪ್ರದಾಯಿಕ ಅಡುಗೆ ತರಬೇತಿ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇಂದು ತೆರೆಕಂಡಿತು.ಕಾರ್ಯಕ್ರಮದ ಅಂಗವಾಗಿ ಮರಗೋಡುವಿನ ಗಣಪತಿ ದೇವಾಲಯದಿಂದ ಸಾಂಪ್ರದಾಯಿಕ ಮೆರವಣಿಗೆ ನಡೆಯಿತು. ಮೆರವಣಿಗೆ ಯನ್ನು ಮರಗೋಡು ಗೌಡ ಸಮಾಜದ ಅಧ್ಯಕ್ಷ ದೇವಜನ ನಾಣಯ್ಯ ತೆಂಗಿನಕಾಯಿ ಒಡೆಯು ವದರ ಮೂಲಕ ಉದ್ಘಾಟಿಸಿದರು. ಮೆರವಣಿಗೆಯಲ್ಲಿ ವಾದ್ಯಗೋಷ್ಠಿ ಗಳೊಂದಿಗೆ ಗೌಡ ಜನಾಂಗದ ಸಾಂಪ್ರದಾಯಿಕ ಉಡುಪು ತೊಟ್ಟ ಪುರುಷರು, ಕಳಸ ಹೊತ್ತ ಮಹಿಳೆಯರು ಪಾಲ್ಗೊಂಡು ಗಮನ ಸೆಳೆದರು.
ಸಾಂಪ್ರದಾಯಿಕ ಸೀರೆ ತೊಟ್ಟ ಹೆಣ್ಣು ಮಕ್ಕಳು, ವಿವಿಧ ಕಲಾ ತಂಡಗಳು, ಶ್ರೀ ವೆಂಕಟರಮಣ ಸ್ವಾಮಿಯ ಹರಿಸೇವೆಯ ತಂಡ, ಮಂಡ್ಯದ ಪೂಜಾ ಕುಣಿತದ ತಂಡ, ಕೋಲ ಹಾಗೂ ಕೊಡಗಿನ ಕುಲಮಾತೆ ಕಾವೇರಿಯ ಚಿತ್ರಣ ಮೆರವಣಿಗೆಗೆ ಮೆರುಗು ನೀಡಿತು.
5 ದಿನಗಳ ಕಾಲ 50 ಕ್ಕೂ ಹೆಚ್ಚು ಬಗೆಯ ತಿಂಡಿ ತಿನಿಸು ಹಾಗೂ ಆಹಾರ ಪದಾರ್ಥಗಳನ್ನು ತಯಾರಿಸ ಲಾಗಿತ್ತು. ಸಮಾರೋಪ ಸಮಾರಂಭದಲ್ಲಿ 50 ಕ್ಕೂ ಹೆಚ್ಚು ಬಗೆಯ ತಿಂಡಿ ತಿನಿಸುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಸಾಂಪ್ರದಾಯಿಕ ಅಡುಗೆ ಪ್ರದರ್ಶನವನ್ನು ನಿವೃತ್ತ ಶಿಕ್ಷಕರಾದ ಅಯ್ಯಂಡ್ರ ಪಾರ್ವತಿ ಪೂಣಚ್ಚ ಉದ್ಘಾಟಿಸಿದರು.
ಶ್ಲಾಘನೀಯ ಪ್ರಯತ್ನ: ಸಂಸ್ಕøತಿಯ ಆಚಾರ ವಿಚಾರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಿರುವದು ಶ್ಲಾಘನೀಯ ಪ್ರಯತ್ನ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಮೆಚ್ಚುಗೆ ವ್ಯಕ್ತ ಪಡಿಸಿದರು.ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ನಮ್ಮ ಆಹಾರ ಪದ್ಧತಿ, ಆಚಾರ ವಿಚಾರವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಹಿಂದೆ ಕಲಬೆರಕೆ ಇಲ್ಲದ ಆಹಾರ ಪದಾರ್ಥಗಳನ್ನು ನಾವು ಸೇವಿಸುತ್ತಿದ್ದೆವು.
ಸಾಂಪ್ರದಾಯಿಕ ಅಡುಗೆ ಪದ್ಧತಿಯಿಂದ ನಮ್ಮ ಆರೋಗ್ಯ ವೃದ್ಧಿಸುತ್ತದೆ.
(ಮೊದಲ ಪುಟದಿಂದ) ಮನೆಯಲ್ಲಿಯೇ ತಯಾರಿಸಿದ ಆಹಾರ ಸೇವಿಸುವದು ಆರೋಗ್ಯ ದೃಷ್ಟಿಯಿಂದ ಉತ್ತಮ ಎಂದರು. ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುನೀಲ್ ಸುಬ್ರಮಣಿ ಮಾತನಾಡಿ, ಇಂತಹ ಕಾರ್ಯಕ್ರಮಕ್ಕೆ ಎಲ್ಲರು ಬೆಂಬಲ ನೀಡಬೇಕು ಎಂದರು.ಉಪನ್ಯಾಸಕ ಪಟ್ಟಡ ಶಿವಕುಮಾರ್ ಅರೆಭಾಷಿಕರ ಅಡುಗೆ ಸಂಸ್ಕøತಿಯ ವಿಶ್ಲೇಷಣೆ ಎಂಬ ವಿಷಯದಲ್ಲಿ ವಿಚಾರ ಮಂಡಿಸಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯ ಮಂದ್ರೀರ ಮೋಹನ್ ದಾಸ್ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬೆಂಗಳೂರು ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷೆ ದಿವ್ಯಪ್ರಭ ಚಿಲ್ತಡ್ಕ, ಹೊಸ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ.ಪಿ.ಎನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ತಾಲೂಕು ಪಂಚಾಯಿತಿ ಸದಸ್ಯ ಅಪ್ರು ರವೀಂದ್ರ ಮತ್ತಿತರರು ಇದ್ದರು.