ಕುಶಾಲನಗರ, ಜು. 21: ಸೋಮವಾರಪೇಟೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ಜಂಟಿ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಮಲೇರಿಯ ಕುರಿತಾಗಿ ಜಾಗೃತಿ ಮೂಡಿಸಿದರು. ವಿವಿಧ ಘೋಷಣೆಗಳ ನಾಮಫಲಕಗಳನ್ನು ಹಿಡಿದು ಮಲೇರಿಯಾ ಹರಡುವ ಮತ್ತು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಿದರು.

ನಂತರ ಶಾಲೆಯ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪಾರ್ವತಿ ಪಾಲ್ಗೊಂಡು ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭ ಆರೋಗ್ಯ ಇಲಾಖೆಯ ಜಿಲ್ಲಾ ಮೇಲ್ವಿಚಾರಕ ದೇವರಾಜ್, ತಾಲೂಕು ಮೇಲ್ವಿಚಾರಕರಾದ ದಮಯಂತಿ, ಕೆ.ಪಿ. ಮಹೇಶ್, ಮುಖ್ಯಶಿಕ್ಷಕಿ ಬಲ್ಕಿಸ್ ಭಾನು, ಇಕೋ ಕ್ಲಬ್ ಸಂಚಾಲಕಿ ಆಯಚ್ಚು, ಉಪನ್ಯಾಸಕರಾದ ಸದಾಶಿವ ಪಲ್ಲೇದ್, ಎನ್‍ಆರ್‍ಹೆಚ್‍ಎಂ ಸಿಬ್ಬಂದಿ ವರ್ಗದವರು ಇದ್ದರು.