ವೀರಾಜಪೇಟೆ, ಜು. 30: ಮಹದಾಯಿ ನ್ಯಾಯಾಧೀಕರಣದ ತೀರ್ಪು ಕರ್ನಾಟಕಕ್ಕೆ ಮಾರಕವಾಗಿರುವ ಹಿನ್ನೆಲೆಯಲ್ಲಿ ರೈತ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಇಂದು ವೀರಾಜಪೇಟೆ ಸಮುಚ್ಚಯ ನ್ಯಾಯಾಲಯಗಳ ವಕೀಲರು ನ್ಯಾಯಾಲಯಗಳಿಗೆ ಗೈರು ಹಾಜರಾದುದರಿಂದ ನ್ಯಾಯಾಲಯ ಗಳ ಕಾರ್ಯಕಲಾಪಗಳು ಸ್ಥಗಿತಗೊಂಡಿದ್ದವು.
ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಎನ್.ಜಿ. ಕಾಮತ್ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ವಕೀಲರ ಸಂಘದ ನಿರ್ದೇಶನದಂತೆ ಇಂದು ವಕೀಲರುಗಳು ನ್ಯಾಯಾಲಯಗಳಿಗೆ ಹಾಜರಾಗಲಿಲ್ಲ ಎಂದು ಹೇಳಿದರು.
ವೀರಾಜಪೇಟೆಯಲ್ಲಿ ಇಂದು ಸಾರಿಗೆ ಸಂಸ್ಥೆಯ ಬಸ್‍ಗಳು ರಸ್ತೆಗಿಳಿಯಲಿಲ್ಲ. ಎಲ್ಲಾ ಶಾಲಾ, ಕಾಲೇಜುಗಳು, ಸರಕಾರಿ ಕಚೇರಿಗಳು, ಬ್ಯಾಂಕ್‍ಗಳು, ಆಟೋ ರಿಕ್ಷಾಗಳು, ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.